ನವದೆಹಲಿ: ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುವ ನಿರೀಕ್ಷೆಯಿದೆ ಎಂದು ದೇವಾಲಯ ನಿರ್ಮಾಣ ಸಮಿತಿ ಮುಖ್ಯಸ್ಥ ನೃಪೇಂದ್ರ ಮಿಶ್ರಾ ಅವರು ತಿಳಿಸಿದ್ದಾರೆ.

ನೆಲ ಮಹಡಿಯ ನಿರ್ಮಾಣ ಕಾಮಗಾರಿ ಡಿಸೆಂಬರ್ ಅಂತ್ಯಕ್ಕೆ ಮುಕ್ತಾಯವಾಗಲಿದ್ದು 2024ರ ಜನವರಿ ತಿಂಗಳ ನಾಲ್ಕನೇ ವಾರದಲ್ಲಿ ಮೂರ್ತಿ ಪ್ರತಿಷ್ಠಾಪನೆ ನಡೆಯುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

ಜನವರಿ 20ರಿಂದ 24ರ ನಡುವೆ ನಡೆಯುವ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದಾರೆ. ಪ್ರತಿಷ್ಠಾಪನೆಯ ಅಂತಿಮ ದಿನಾಂಕವನ್ನು ಮೋದಿ ಅವರಿಗೆ ಇನ್ನೂ ತಿಳಿಸಬೇಕಿದೆ’ ಎಂದು ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ತಿಳಿಸಿದ್ದಾರೆ.

‘ದೇಗುಲದ ಗೋಪುರದಲ್ಲಿ ಅಳವಡಿಸಬೇಕಿರುವ ವಿಶಿಷ್ಟ ಉಪಕರಣದ ವಿನ್ಯಾಸ ಕಾರ್ಯ ಬೆಂಗಳೂರಿನಲ್ಲಿ ನಡೆಯುತ್ತಿದೆ. ಪ್ರತಿ ವರ್ಷ ರಾಮನವಮಿಯ ದಿನದಂದು ಶ್ರೀರಾಮನ ಹಣೆಗೆ ಸೂರ್ಯನ ಕಿರಣಗಳು ನೇರವಾಗಿ ಬೀಳುವಂತೆ ಮಾಡಲು ಈ ಉಪಕರಣ ಸಹಕಾರಿಯಾಗಿದೆ. ರೂರ್ಕಿಯ ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಮತ್ತು ಪುಣೆಯ ಒಂದು ಸಂಸ್ಥೆ ಜಂಟಿಯಾಗಿ ಇದಕ್ಕಾಗಿ ಗಣಕೀಕೃತ ಕಾರ್ಯಕ್ರಮವನ್ನು ರಚಿಸಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.