ಅಯೋಧ್ಯೆ: ಅಯೋಧ್ಯೆ ರಾಮ ಮಂದಿರದ ಗರ್ಭಗುಡಿಯೊಳಗೆ ರಾಮನ ವಿಗ್ರಹವನ್ನು ಎಂಟು ಅಡಿ ಎತ್ತರದ ಚಿನ್ನ ಲೇಪಿತ ಅಮೃತಶಿಲೆಯ ಸಿಂಹಾಸನದ ಮೇಲೆ ಇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಸದಸ್ಯರೊಬ್ಬರು ಮಂಗಳವಾರ ತಿಳಿಸಿದ್ದಾರೆ.

ರಾಜಸ್ಥಾನದ ಕಲಾವಿದರೊಬ್ಬರು ಇದನ್ನು ತಯಾರಿಸಿದ್ದು, ಡಿಸೆಂಬರ್ 15ಕ್ಕೆ ಅಯೋಧ್ಯೆಯನ್ನು ತಲುಪಲಿದೆ. ಗರ್ಭಗುಡಿಯ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಸಿಂಹಾಸನವು 8 ಅಡಿ ಎತ್ತರ. 3 ಅಡಿ ಉದ್ದ ಹಾಗೂ 4 ಅಡಿ ಅಗಲ ಇರಲಿದೆ ಎಂದು ಟ್ರಸ್ಟ್ನ ಸದಸ್ಯ ಅನಿಲ್ ಮಿಶ್ರಾ ಹೇಳಿದ್ದಾರೆ.

ಡಿ.15ರ ಹೊತ್ತಿಗೆ ರಾಮ ದೇವಾಲಯದ ನೆಲಮಹಡಿ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ, ಮೊದಲ ಮಹಡಿಯ ನಿರ್ಮಾಣ ಶೇ 80ರಷ್ಟು ಮುಗಿದಿದೆ ಎಂದಿದ್ದಾರೆ.

ಭಕ್ತರು ಅಪಾರ ಪ್ರಮಾಣದ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ದಾನ ಮಾಡಿದ್ದಾರೆ. ಅವುಗಳನ್ನು ಸಂಗ್ರಹಿಸಿಡಲು ಕಷ್ಟವಾಗುವುದರಿಂದ ಕರಗಿಸಲಾಗುತ್ತದೆ. ಪ್ರತಿಷ್ಠಿತ ಸಂಸ್ಥೆಯ ಮಾರ್ಗದರ್ಶನದಲ್ಲಿ ಅದನ್ನು ಲೋಹಗಳನ್ನು ಕರಗಿಸಲಾಗುತ್ತದೆ ಎಂದು ಮಿಶ್ರಾ ಹೇಳಿದ್ದಾರೆ.
.ರಾಮಮಂದಿರ ಶೀಘ್ರ ಪೂರ್ಣ: ಮೋದಿ.ರಾಮಮಂದಿರ ನಿರ್ಮಾಣಕ್ಕೆ ಮಾರ್ಚ್ವರೆಗೆ ₹900 ಕೋಟಿ ಖರ್ಚು: ಟ್ರಸ್ಟ್ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.