ನವದೆಹಲಿ: ಬೆಂಗಳೂರಿನಲ್ಲಿ ಬಿಬಿಎಂಪಿ ಅಧಿಕಾರಿಗಳು ಹಾಗೂ ಸಚಿವರ ಜತೆಗೆ ಯಾವುದೇ ಅಧಿಕೃತ ಸಭೆ ನಡೆಸಿಲ್ಲ ಎಂದು ಕಾಂಗ್ರೆಸ್ ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸ್ಪಷ್ಟಪಡಿಸಿದರು.

‘ಬಿಬಿಎಂಪಿ ಅಧಿಕಾರಿಗಳ ಜತೆಗೆ ಸುರ್ಜೆವಾಲಾ ಸಭೆ ನಡೆಸಿದ್ದು, ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಮಾಡಿಕೊಂಡಿದೆ’ ಎಂದು ಆರೋಪಿಸಿ ಬಿಜೆಪಿಯ ನಿಯೋಗವು ರಾಜ್ಯಪಾಲರಿಗೆ ದೂರು ನೀಡಿತ್ತು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಅವರು, ‘ನಾನು ಬೆಂಗಳೂರಿನ ಹೋಟೆಲ್‌ನಲ್ಲಿ ತಂಗಿದ್ದೆ. ಅಲ್ಲಿ ನಮ್ಮ ಕೆಪಿಸಿಸಿ ಅಧ್ಯಕ್ಷರು ಹಾಗೂ ಕೆಲವು ಸಚಿವರು ಇರುವುದು ಗೊತ್ತಾಯಿತು. ಚಹಾ ಕುಡಿಯಲೆಂದು ಎಲ್ಲರೂ ಒಟ್ಟಿಗೆ ಸೇರಿದೆವು. ಆ ವೇಳೆ, ಬಿಬಿಎಂಪಿಯ ಅಧಿಕಾರಿಗಳು ಬಂದರು. ಅಲ್ಲಿ ನಾನು ಸಭೆ ನಡೆಸಿಲ್ಲ. ಆ ಅಧಿಕಾರವೂ ನನಗೆ ಇಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.