ನವದೆಹಲಿ: ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿ, ಆಕೆಯ ಗಂಡನ ಆತ್ಮಹತ್ಯೆಗೆ ಕಾರಣವಾಗಿದ್ದಾರೆ ಎಂಬ ಆರೋಪದ ಮೇಲೆ ಭಾರತೀಯ ಸೇನೆಯ ಮೇಜರ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ದೆಹಲಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಸೆ.25ರಂದು ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ದೆಹಲಿ ಕಂಟೋನ್ಮೆಂಟ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಜುಲೈ 12ರಂದು ನನ್ನ ಮೇಲೆ ಮೇಜರ್ ಆತ್ಯಾಚಾರ ಎಸಗಿದ್ದು, ಇದರಿಂದ ನೊಂದ ನನ್ನ ಪತಿ ಅದೇ ದಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಮಹಿಳೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಆತ್ಯಾಚಾರ ಆರೋಪ ಮಾಡಿರುವ ಮಹಿಳೆಯ ಗಂಡ ಸೇನೆಯು ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅತ್ಯಾಚಾರ ನಡೆದ ಬಳಿಕವೂ ಮಹಿಳೆಯು ಮೇಜರ್ ಮನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ನೀಡಿರುವ ದೂರಿನ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.