ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಜಂಟಿ ಕಾರ್ಯತಂತ್ರ ರೂಪಿಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇದೇ 15ರಂದು ನವದೆಹಲಿಯಲ್ಲಿ ಪ್ರತಿಪಕ್ಷಗಳ 22 ನಾಯಕರ ಸಭೆ ಕರೆದ ಬೆನ್ನಲ್ಲೇ, ಕಾಂಗ್ರೆಸ್ ಕೂಡಾ, ಭಿನ್ನಾಭಿಪ್ರಾಯ ತೊರೆದು ಮುಕ್ತ ಮನಸಿನಿಂದ ಚರ್ಚೆಗೆ ಬರುವಂತೆ ಪ್ರತಿಪಕ್ಷಗಳನ್ನು ಆಹ್ವಾನಿಸಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜೂನ್ 9ರಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಮಮತಾ ಸೇರಿದಂತೆ ಇತರ ನಾಯಕರನ್ನು ಸಂಪರ್ಕಿಸಿದ್ದಾರೆ. ಆದರೆ, ಅವರ ಅನಾರೋಗ್ಯದ ಕಾರಣ ಇತರ ನಾಯಕರೊಂದಿಗೆ ಸಮನ್ವಯ ಸಾಧಿಸಲು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಯೋಜಿಸಿದ್ದಾರೆ ಎಂದು ಪಕ್ಷವು ಹೇಳಿದೆ.

‘ನಮ್ಮ ದೇಶದ ಸಲುವಾಗಿ ನಮ್ಮ ಭಿನ್ನಾಭಿಪ್ರಾಯಗಳನ್ನು ಮೀರಿ ಒಗ್ಗೂಡುವ ಪಕ್ವ ಸಮಯ ಇದಾಗಿದೆ. ಇದಕ್ಕೆ ಮುಕ್ತ ಮನಸಿನ ಚರ್ಚೆಗಳೂ ಅಗತ್ಯವಾಗಿವೆ’ ಎಂದೂ ಕಾಂಗ್ರೆಸ್ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.