ಮುಂಬೈ:ಸೆಪ್ಟೆಂಬರ್ 4 ರಂದು ಕಾರು ಅಪಘಾತದಲ್ಲಿ ಮೃತಪಟ್ಟಿದ್ದ ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ (54) ಅವರ ಅಂತ್ಯಕ್ರಿಯೆ ಮುಂಬೈನಲ್ಲಿ ನಡೆಯಿತು.

ಮುಂಬೈನ ವರ್ಲಿ ಸ್ಮಶಾನದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಮಿಸ್ತ್ರಿ ಅವರ ಪಾರ್ಸಿ ಸಮುದಾಯದ ಸದಸ್ಯರು, ಉದ್ಯಮಿಗಳು ಮತ್ತು ರಾಜಕಾರಣಿಗಳು ಭಾಗವಹಿಸಿದ್ದರು.

ವಿಶೇಷವಾಗಿ ಟಾಟಾ ಗ್ರುಪ್‌ನ ರತನ್ ಟಾಟಾ ಅವರ ಮಲತಾಯಿ, 92 ವರ್ಷ ವಯಸ್ಸಿನ ಸಿಮೋನ್ ಟಾಟಾ ಅವರು ಸಹಸೈರಸ್ ಮಿಸ್ತ್ರಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು. ವೀಲ್‌ಚೇರ್‌ನಲ್ಲಿ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

ಭಾನುವಾರ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬಳಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದಿದ್ದರಿಂದಸೈರಸ್ ಮಿಸ್ತ್ರಿ ಅವರು ಸಾವನ್ನಪ್ಪಿದರು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದರು.

ಸೂರ್ಯ ನದಿಯ ಸೇತುವೆ ಮೇಲೆ ಅಪರಾಹ್ನ 3.15ರ ಸುಮಾರಿಗೆ ಅಪಘಾತ ಸಂಭವಿಸಿತ್ತು.ಮುಂಬೈನ ಸ್ತ್ರೀರೋಗತಜ್ಞೆ ಅನಾಹಿತಾ ಪಾಂಡೋಲೆ ಅವರು ಕಾರನ್ನು ಚಲಾಯಿಸುತ್ತಿದ್ದರು. ಕಾರು ಅತ್ಯಂತ ವೇಗವಾಗಿ ಚಲಿಸುತ್ತಿತ್ತು. ಈ ವೇಳೆ ಎಡಗಡೆಯಿಂದ ಇನ್ನೊಂದು ವಾಹನವನ್ನು ಓವರ್‌ಟೇಕ್ ಮಾಡಲು ಯತ್ನಿಸಿದಾಗ ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಎನ್ನುವುದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿತ್ತು.

ಅಲ್ಲದೇ ಸೇತುವೆಯ ಅವೈಜ್ಞಾನಿಕ ಕಾಮಗಾರಿ ಕೂಡ ಈ ದುರ್ಘಟನೆಗೆ ಕಾರಣವಾಗಿತ್ತು ಎಂದು ತನಿಖೆಯಲ್ಲಿ ಗೊತ್ತಾಗಿತ್ತು.

ಕಾರು ಚಲಾಯಿಸುತ್ತಿದ್ದ ಅನಾಹಿತಾ ಪಾಂಡೋಲೆ ಮತ್ತು ಆಕೆಯ ಪತಿ ಡೇರಿಯಸ್ ಪಾಂಡೋಲೆಗೆ ಗಾಯಗಳಾಗಿವೆ. ಆದರೆ, ಮಿಸ್ತ್ರಿ ಮತ್ತು ಡೇರಿಯಸ್‌ನ ಸಹೋದರ ಜಹಂಗೀರ್ ಪಾಂಡೋಲೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದರು.

ಕಾಣೆಯಾಗಿದ್ದಾರೆಂದು ಸಚಿವರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್! ಯಾರವರು?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.