ಮುಂಬೈ: ಹೆಸರಾಂತ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಟಾಟಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಗುರುವಾರ ಬೆಳಗ್ಗೆ 10 ರಿಂದ ಸಂಜೆ 4ರವರೆಗೆ ದಕ್ಷಿಣ ಮುಂಬೈನ ರಾಷ್ಟ್ರೀಯ ಲಿಲಿತ ಕಲಾ ಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
.ಹೆಸರಾಂತ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನ.ರತನ್ ಟಾಟಾ ಅಗಲಿಕೆ... ಸಂತನಂತೆ ಬದುಕಿದ ಉದ್ಯಮದ ದಿಗ್ಗಜ.
ಬುಧವಾರ ಬೆಳಿಗ್ಗೆ ಅವರ ಆರೋಗ್ಯಸ್ಥಿತಿಯಲ್ಲಿ ಏರುಪೇರು ಕಾಣಿಸಿಕೊಂಡ ಕಾರಣ ಅವರನ್ನು ಮುಂಬೈನ ಬ್ರೀಚ್ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ ಸುಮಾರಿಗೆ 11.30 ಗಂಟೆಗೆ ಅವರು ನಿಧನರಾದರು.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಶಿಂದೆ, 'ಟಾಟಾ ಎಂದರೆ ನೈತಿಕತೆ ಮತ್ತು ಉದ್ಯಮಶೀಲತೆಯ ವಿಶಿಷ್ಟ ಮಿಶ್ರಣ. 150 ವರ್ಷಗಳ ಹಳೆಯದಾದ ಟಾಟಾ ಸಮೂಹವನ್ನು ಯಶಸ್ವಿಯಾಗಿ ಮುನ್ನಡೆಸಿದ ಜೀವಂತ ದಂತಕಥೆಯಾಗಿದ್ದರು. ಟಾಟಾ ಅವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು' ಎಂದು ತಿಳಿಸಿದ್ದಾರೆ.

ಟಾಟಾ ದೇಶದ ಹೆಮ್ಮೆ ಎಂದು ಬಣ್ಣಿಸಿದ ಶಿಂದೆ, ಮುಂದಿನ ಪೀಳಿಗೆಯ ಉದ್ಯಮಿಗಳಿಗೆ ಅವರು ಸದಾ ಸ್ಫೂರ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಇಂದು ಒಂದು ದಿನದ ಶೋಕಾಚರಣೆ ಇರಲಿದ್ದು, ಯಾವುದೇ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಶಿಂದೆ ತಿಳಿಸಿದ್ದಾರೆ.
.ಬಲಪಂಥೀಯರ ಕೊಳಕು ಮಿದುಳುಗಳನ್ನು ತೊಳೆಯಲಾಗದು; ಪಾದವಾದರೂ ಶುಚಿಯಾಗಲಿ: ಉದಯನಿಧಿ.ಸಚಿವ ಸ್ಥಾನಕ್ಕಾಗಿ ಮುನಿರತ್ನ ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್: ಸಂತ್ರಸ್ತೆಯ ಆರೋಪ.ಕುಂಭಮೇಳ | ಸನಾತನೇತರರಿಗಿಲ್ಲ ಆಹಾರ ಮಳಿಗೆ ಹಾಕುವ ಅವಕಾಶ: ಅಖಾಡ ಪರಿಷತ್ .ಟಾಟಾ ಸನ್ಸ್ನ ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ: ವರದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.