ಪುರಿ (ಒಡಿಶಾ): ಇಲ್ಲಿನ ಜಗನ್ನಾಥ ದೇವಾಲಯದಲ್ಲಿ ಇಂದು (ಭಾನುವಾರ) ನಡೆದ ರಥೋತ್ಸವದ ವೇಳೆ ನೂಕುನುಗ್ಗಲು ಉಂಟಾದ ಪರಿಣಾಮ ಭಕ್ತರೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ರಥವನ್ನು ಎಳೆಯುವ ಸಂದರ್ಭದಲ್ಲಿ ಅಧಿಕ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು. ನೂಕುನುಗ್ಗಲು ಉಂಟಾದ ಪರಿಣಾಮ ಭಕ್ತರೊಬ್ಬರು ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಪುರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸದ್ಯ ರಥ ಎಳೆಯುವ ಕಾರ್ಯಕ್ರಮವನ್ನು ದಿನದ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಂಜೆ ವೇಳೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ದೇವಾಲಯಕ್ಕೆ ಭೇಟಿ, ವಿಶೇಷ ಪೂಜೆ ಸಲ್ಲಿಸಿದ್ದರು.
.ವೈಭವದ ಪುರಿ ಜಗನ್ನಾಥ ರಥೋತ್ಸವ.ಪುರಿ ಜಗನ್ನಾಥ ರಥಯಾತ್ರೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.