ಪಟ್ನಾ: ಪಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರನ್ನು ಕಣಕ್ಕಿಳಿಸಿದ್ದಕ್ಕಾಗಿ ಬಿಜೆಪಿ ಕಾರ್ಯಕರ್ತರು ರವಿ ಶಂಕರ್ ಪ್ರಸಾದ್ ಗೋಬ್ಯಾಕ್ ಎಂದು ಘೋಷಣೆ ಕೂಗಿ ಪ್ರತಿಭಟಿಸಿದ್ದಾರೆ.

ಮಂಗಳವಾರ ಪಟ್ನಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ರವಿಶಂಕರ್ ಪ್ರಸಾದ್ ಅವರ ವಿರುದ್ಧ ಆರ್.ಕೆ. ಸಿನ್ಹಾ ಅವರ ಬೆಂಬಲಿಗರು ಈ ರೀತಿ ಘೋಷಣೆ ಕೂಗಿದ್ದಾರೆ.

ಪಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರವನ್ನು ಶತ್ರುಘ್ನ ಸಿನ್ಹಾ ಎರಡು ಬಾರಿ ಪ್ರತಿನಿಧಿಸಿದ್ದರು. ಬಿಜೆಪಿಯಿಂದ ಆಯ್ಕೆಯಾಗಿದ್ದರೂ ಶತ್ರುಘ್ನ ಸಿನ್ಹಾ ಮೋದಿ ಸರ್ಕಾರವನ್ನು ಟೀಕಿಸುತ್ತಲೇ ಇದ್ದರು.ರಫೇಲ್ ಪ್ರಕರಣ, ಜಿಎಸ್ಟಿ, ನೋಟು ರದ್ದತಿ ಕುರಿತಂತೆ ಕಟುವಾಗಿ ಟೀಕೆ ಮಾಡಿದ್ದರು. ಹಾಗಾಗಿ ಬಿಜೆಪಿ ಈ ಬಾರಿ ಸಿನ್ಹಾಗೆ ಟಿಕೆಟ್ ನಿರಾಕರಿಸಿ ರವಿಶಂಕರ್ ಪ್ರಸಾದ್ ಅವರಿಗೆ ಬಿಜೆಪಿ ಟಿಕೆಟ್ ನೀಡಿತ್ತು.

ಆದಾಗ್ಯೂ, ಈ ಕ್ಷೇತ್ರದಲ್ಲಿ ಪ್ರಭಾವಿ ನಾಯಕರಾಗಿದ್ದ ಆರ್.ಕೆ.ಸಿನ್ಹಾ ಅವರಿಗೆ ಟಿಕೆಟ್ ನಿರಾಕರಿಸಿ ರವಿಶಂಕರ್ ಪ್ರಸಾದ್ ಅವರಿಗೆ ಟಿಕೆಟ್ ನೀಡಿದ್ದಕ್ಕಾಗಿ ಸಿನ್ಹಾ ಅವರ ಬೆಂಬಲಿಗರು ಈ ರೀತಿ ಪ್ರತಿಭಟನೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.