ಜೈಪುರ (ರಾಜಸ್ಥಾನ): ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್, ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕೆಂಪು ಡೈರಿ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಗುರುವಾರ (ನಿನ್ನೆ) ಜೈಪುರದ ಕಾಮರ್ಸ್ ಕಾಲೇಜಿನಲ್ಲಿ ನಡೆದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, 'ಚುನಾಯಿತ ಸರ್ಕಾರಗಳನ್ನು ಉರುಳಿಸಿದ ಬಿಜೆಪಿಗೆ ಅಧಿಕಾರದಲ್ಲಿರಲು ಯಾವುದೇ ನೈತಿಕ ಹಕ್ಕಿಲ್ಲ' ಎಂದು ಕಿಡಿಕಾರಿದರು.

ಕೆಂಪು ಡೈರಿಯನ್ನು ವಜಾಗೊಂಡ ಸಚಿವ ರಾಜೇಂದ್ರ ಗೂಡಾ ಹೊಂದಿದ್ದು, ಅದರಲ್ಲಿ ಮುಖ್ಯಮಂತ್ರಿ ಅವರ ಹಣಕಾಸು ವಹಿವಾಟು ಇದೆ ಎಂದು ಹೇಳಿದ್ದರು.

ಮಣಿಪುರದಲ್ಲಿ ನಡೆದ ಹಿಂಸಾಚಾರದ ಕುರಿತು ಚರ್ಚೆ ನಡೆಯುತ್ತಿರುವಾಗ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ವಿಧಾನಸಭೆಯಲ್ಲಿ ತಮ್ಮದೇ ಸರ್ಕಾರವನ್ನು ಪ್ರಶ್ನಿಸಿದ್ದ ಗುಡಾ ಅವರನ್ನು ಜುಲೈನಲ್ಲಿ ಸಿಎಂ ಗೆಹಲೋತ್ ವಜಾಗೊಳಿಸಿದ್ದರು.

ಇದೇ ವೇಳೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಗೆಹಲೋತ್, ರಾಜ್ಯಗಳನ್ನು ಬಲಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಆದರೆ ಇದಕ್ಕೆ ವಿರುದ್ಧವಾಗಿ, ರಾಜಸ್ಥಾನ ಸರ್ಕಾರವನ್ನು ಬೀಳಿಸಲು ಎಲ್ಲಾ ಪ್ರಯತ್ನ ಮಾಡಲಾಯಿತು ಎಂದು ದೂರಿದರು.

ಸಚಿನ್ ಪೈಲಟ್ ಮತ್ತು ಇತರ 18 ಮಂದಿ ಕಾಂಗ್ರೆಸ್ ಶಾಸಕರ ಬಂಡಾಯದಿಂದ ಉಂಟಾದ 2020ರ ರಾಜಕೀಯ ಬಿಕ್ಕಟ್ಟನ್ನು ಉಲ್ಲೇಖಿಸಿದ ಅವರು ಅಮಿತ್ ಶಾ, ಧರ್ಮೇಂದ್ರ ಪ್ರಧಾನ್ ಮತ್ತು ಗಜೇಂದ್ರ ಸಿಂಗ್ ಶೇಖಾವತ್ ಅವರು ತಮ್ಮ ಸರ್ಕಾರವನ್ನು ಉರುಳಿಸಲು ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
.ರಾಜಸ್ಥಾನ | ಸತ್ಯವನ್ನು ನುಡಿದಿದ್ದಕ್ಕೆ ಸಚಿವ ಸ್ಥಾನದಿಂದ ರಾಜೇಂದ್ರ ವಜಾ: ಬಿಜೆಪಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.