ಕೊಚ್ಚಿ: ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಸಂಬಂಧಮಹಿಳಾ ಹೋರಾಟಗಾರ್ತಿ ರೆಹನಾ ಫಾತಿಮಾ ಅವರನ್ನು ಪತ್ತನಂತಿಟ್ಟ ಪೊಲೀಸರು ಬಂಧಿಸಿದ ಬೆನ್ನಲ್ಲೆ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ ಎಂದು ಬಿಎಸ್‌ಎನ್‌ಎಲ್ ವಕ್ತಾರರು ತಿಳಿಸಿದ್ದಾರೆ.

ರೆಹನಾ ಫಾತಿಮಾ ಅವರನ್ನು ಬಂಧಿಸಿ ವಿಚಾರಣೆ ನಡೆಯುತ್ತಿರುವುದರಿಂದ ಅವರನ್ನು ವಜಾ ಮಾಡಲಾಗಿದೆ ಎಂದುಬಿಎಸ್‌ಎನ್‌ಎಲ್ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೆಹಾನಾ ಫಾತಿಮಾ ಅವರು ಫೇಸ್‌ಬುಕ್‌ನಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವಂತಹ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರ ವಿರುದ್ಧ ರಾಧಾಕೃಷ್ಣ ಮೆನನ್ ಎಂಬುವವರು ಪತ್ತನಂತಿಟ್ಟ ಪೊಲೀಸರಿಗೆ ದೂರು ನೀಡಿದ್ದರು. ಇದರ ಅನ್ವಯ ಅಕ್ಟೋಬರ್ 20ರಂದು ಫಾತಿಮಾ ವಿರದ್ಧಐಪಿಸಿ ಸೆಕ್ಷನ್ 295ಎ ಪ್ರಕಾರ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದಲ್ಲಿ ತನ್ನನ್ನು ಬಂಧಿಸಬಹುದು ಎಂಬ ಭೀತಿಯಲ್ಲಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದ ಫಾತಿಮಾ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆಕೆಯ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.

ಎಲ್ಲಾ ವಯೋಮಾನದ ಮಹಿಳೆಯರು ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ನಂತರ ಫಾತಿಮಾ ಮಂದಿರ ಪ್ರವೇಶ ಮಾಡಲು ಯತ್ನಿಸಿದ್ದರು. ಭಕ್ತರ ತೀವ್ರ ಪ್ರತಿಭಟನೆಯಿಂದಾಗಿ ಅವರ ಯತ್ನ ವಿಫಲವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.