ಅಮರಾವತಿ: ಆಂಧ್ರ ಪ್ರದೇಶದಲ್ಲಿ ಭಾರಿ ಮಳೆಯಾಗಿದ್ದು, ಪ್ರವಾಹ ಪೀಡಿತ ವಿಜಯವಾಡದ ಪ್ರದೇಶಗಳಲ್ಲಿ ಜನರಿಗೆ ಆಹಾರ ಪ್ಯಾಕೆಟ್‌ಗಳು, ನೀರಿನ ಬಾಟಲಿಗಳು ಸೇರಿದಂತೆ ಮೂಲಭೂತ ಅಗತ್ಯ ವಸ್ತುಗಳನ್ನು ಹೆಲಿಕಾಪ್ಟರ್ ಮತ್ತು ಡ್ರೋನ್‌ಗಳ ಮೂಲಕ ಪೂರೈಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
.ಪ್ರವಾಹ ಪೀಡಿತ ಆಂಧ್ರ, ತೆಲಂಗಾಣಕ್ಕೆ ₹1 ಕೋಟಿ ದೇಣಿಗೆ ನೀಡಿದ ಜೂನಿಯರ್ ಎನ್ಟಿಆರ್.ಪಶ್ಚಿಮ ಬಂಗಾಳ | ಅತ್ಯಾಚಾರ ತಡೆ ಮಸೂದೆ ಸರ್ವಾನುಮತದಿಂದ ಅಂಗೀಕಾರ.
ಆಹಾರ ವಿತರಣೆಗಾಗಿ ಆರು ಹೆಲಿಕಾಪ್ಟರ್‌ಗಳು ಮತ್ತು ಡ್ರೋನ್‌ಗಳನ್ನು ನಿಯೋಜಿಸಲಾಗಿದೆ. ಬಿಸ್ಕೆಟ್ ಪ್ಯಾಕೆಟ್‌ಗಳು, ಹಣ್ಣುಗಳು, ಹಾಲು, ಔಷಧಿ ಸೇರಿದಂತೆ ಇನ್ನಿತರೆ ವಸ್ತುಗಳನ್ನು ಪೂರೈಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಎನ್‌ಡಿಆರ್‌ಎಫ್ ತಂಡವು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಹೆಲಿಕಾಪ್ಟರ್ ಮೂಲಕ ಜನರಿಗೆ ಆಹಾರ ಪ್ಯಾಕೆಟ್‌ಗಳನ್ನು ಪೂರೈಸುತ್ತಿರುವ ವಿಡಿಯೊವನ್ನು ಸುದ್ದಿಸಂಸ್ಥೆ ‘ಎಎನ್‌ಐ‘ ಟ್ವೀಟ್ ಮಾಡಿದೆ.

ಪ್ರವಾಹದಿಂದ ನಲುಗಿರುವ ವಿಜಯವಾಡದ ಪ್ರದೇಶಗಳಲ್ಲಿ ಅಧಿಕಾರಿಗಳು, ಸಚಿವರು ಸೇರಿದಂತೆ ಕೇಂದ್ರ ರಕ್ಷಣಾ ಪಡೆಗಳು ಪರಿಹಾರ ಕಾರ್ಯಗಳಲ್ಲಿ ತೊಡಗಿವೆ ಎಂದು ಆಂಧ್ರಪ್ರದೇಶ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಎಪಿಎಸ್‌ಡಿಎಂಎ) ಅಧಿಕೃತ ಪ್ರಕಟಣೆ ತಿಳಿಸಿದೆ.
.ಆಂಧ್ರ, ತೆಲಂಗಾಣದಲ್ಲಿ ಭಾರಿ ಮಳೆ: ಎನ್ಡಿಆರ್ಎಫ್ನ 26 ತಂಡಗಳ ನಿಯೋಜನೆ.ನಾಳೆ ಜಮ್ಮುವಿಗೆ ರಾಹುಲ್ ಗಾಂಧಿ ಭೇಟಿ: ಚುನಾವಣಾ ಪ್ರಚಾರದಲ್ಲಿ ಭಾಗಿ.
ಮಳೆ ಸಂಬಂಧ ಅವಘಡಗಳಿಂದ ಆಂಧ್ರಪ್ರದೇಶದಲ್ಲಿ 15 ಮತ್ತು ತೆಲಂಗಾಣದಲ್ಲಿ 16 ಮಂದಿ ಅಸುನೀಗಿದ್ದಾರೆ. ಲಕ್ಷಾಂತರ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಎರಡೂ ರಾಜ್ಯಗಳ ಹಲವೆಡೆ ರಸ್ತೆ ಮತ್ತು ರೈಲು ಸಂಪರ್ಕಗಳು ಕಡಿತವಾಗಿದ್ದು, ಸಹಸ್ರಾರು ಎಕರೆ ಕೃಷಿ ಪ್ರದೇಶ ಜಲಾವೃತವಾಗಿದೆ. ಸಂಕಷ್ಟಕ್ಕೆ ಸಿಲುಕಿರುವ ಜನರ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿದಿದ್ದು, ಪರಿಹಾರ ಕಾರ್ಯಗಳೂ ಸಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.