ನವದೆಹಲಿ: 2018ರ ಭೀಮಾ ಕೊರೆಗಾಂವ್ ಮತ್ತು ಎಲ್ಗಾರ್ ಪರಿಷದ್ ಪ್ರಕರಣ ಸಂಬಂಧ ವಕೀಲೆ, ಸಾಮಾಜಿಕ ಕಾರ್ಯಕರ್ತೆ ಸುಧಾ ಭಾರದ್ವಾಜ್ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ರಿಲೀಫ್ ಸಿಕ್ಕಿದೆ.

ಸುಧಾ ಭಾರದ್ವಾಜ್ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸಲ್ಲಿಸಿರುವ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

ಹೈಕೋರ್ಟ್ ಆದೇಶ ಡಿ.8ರಿಂದ ಜಾರಿಗೆ ಬರುವ ಸಾಧ್ಯತೆ ಇದೆ. ಹೀಗಾಗಿ ಅರ್ಜಿಯ ತ್ವರಿತ ವಿಚಾರಣೆ ನಡೆಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮ ಕೋಹ್ಲಿ ಅವರಿದ್ದ ಪೀಠಕ್ಕೆ ಎನ್ಐಎ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮನವಿ ಮಾಡಿದ್ದರು.

2018ರ ಭೀಮಾ ಕೊರೆಗಾಂವ್ ಮತ್ತು ಎಲ್ಗಾರ್ ಪರಿಷದ್ ಪ್ರಕರಣ ಸಂಬಂಧ ಸುಧಾ ಭಾರದ್ವಾಜ್ ಅವರನ್ನು ಪುಣೆ ಪೊಲೀಸರು 2018 ಅ.27ರಂದು ಬಂಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.