ಕೋಲ್ಕತ್ತ: ಬಿಜೆಪಿ ಅಧಿಕಾರದಲ್ಲಿರುವ ನವಭಾರತದಲ್ಲಿ ರಾಜಕೀಯ ಲಾಭಕ್ಕಾಗಿ ಧರ್ಮವನ್ನು ಆಯುಧವಾಗಿ ಬಳಸಲಾಗುತ್ತಿದೆ ಎಂದು ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಸಾಂವಿಧಾನಿಕ ನಡೆಯ ಮೂಲಕ ಕೇಂದ್ರ ಸರ್ಕಾರವು ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡಲು ಪ್ರಯತ್ನಿಸುತ್ತಿದೆ’ ಎಂದರು.

'ಧರ್ಮ ಯಾವತ್ತಿಗೂ ಇರುತ್ತದೆ. ಬಿಜೆಪಿ ಆಡಳಿತದ ನವಭಾರತದಲ್ಲಿ ರಾಜಕೀಯ ಸ್ವಹಿತಾಸಕ್ತಿಗಾಗಿ ಅದನ್ನು ಬಳಸಲಾಗುತ್ತಿದೆ ಎನ್ನುವುದು ಹೊಸ ವಿಚಾರ’ ಎಂದು ಹೇಳಿದರು.

‘ದೇಶದ ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಯು ಅಪಾಯದಲ್ಲಿದೆ. ಕೇಂದ್ರ ಸರ್ಕಾರವು ಟೀಕೆಗಳನ್ನು ಸ್ವೀಕರಿಸುವುದಿಲ್ಲ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದೇ ಇರುವವರು ತಮ್ಮನ್ನು ತಾವು ಸ್ವಾತಂತ್ರ್ಯ ಹೋರಾಟಗಾರರೆಂದು ಕರೆದುಕೊಳ್ಳುತ್ತಿದ್ದಾರೆ. ಇದು ನಾಚಿಗೇಡಿನ ಸಂಗತಿ’ ಎಂದರು.

‘ನವಭಾರತದಲ್ಲಿ ಅಸಮಾನತೆ ತಾಂಡವವಾಡುತ್ತಿದೆ. ಆರ್ಥಿಕವಾಗಿ ಸಶಕ್ತರಾಗಿರುವ ಶೇಕಡ ಒಂದರಷ್ಟು ಜನರು ರಾಷ್ಟ್ರದ ಶೇ 40ರಷ್ಟು ಸಂಪನ್ಮೂಲವನ್ನು ನಿಯಂತ್ರಿಸುತ್ತಿದ್ದಾರೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.