ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಸಂಜಯ್ ಸಿಂಗ್ ವಿರುದ್ಧ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ವಿಚಾರಣೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಮೆಟ್ರೊಪಾಲಿಟನ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡಲು ನಿರಾಕರಿಸಿದ ನ್ಯಾಯಮೂರ್ತಿ ಸಮೀರ್ ದಾವೆ ಅವರು, ಈ ಹಿಂದೆ ಕೇಜ್ರಿವಾಲ್ ಮತ್ತು ಸಂಜಯ್ ಸಿಂಗ್ ಅವರು ವಿಚಾರಣೆಗೆ ಹಾಜರಾಗುವುದಾಗಿ ಸೆಷನ್ಸ್ ನ್ಯಾಯಾಲಯಕ್ಕೆ ಭರವಸೆ ನೀಡಿದ್ದನ್ನು ಉಲ್ಲೇಖಿಸಿದರು.

ವಿಚಾರಣೆಗೆ ಹಾಜರಾಗುವಂತೆ ಮೆಟ್ರೊಪಾಲಿಟನ್ ನ್ಯಾಯಾಲಯವು ಕೇಜ್ರಿವಾಲ್ ಮತ್ತು ಸಂಜಯ್ ಸಿಂಗ್ ಅವರಿಗೆ ಸಮನ್ಸ್ ನೀಡಿತ್ತು. ಇದನ್ನು ಪ್ರಶ್ನಿಸಿ ಇಬ್ಬರು ಮುಖಂಡರು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸೆಷನ್ಸ್ ನ್ಯಾಯಾಲಯವು ಈ ಅರ್ಜಿಯನ್ನು ತಳ್ಳಿ ಹಾಕಿತ್ತು. ಬಳಿಕ ಇವರು ಗುಜರಾತ್ ಹೈಕೋರ್ಟ್ ಮೊರೆ ಹೋಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.