ನವದೆಹಲಿ: ಈ ವರ್ಷಾಂತ್ಯದ ಒಳಗಾಗಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಈಗಿರುವ ಬಲ್ಬ್‌ಗಳ ಬದಲಾಗಿ ಎಲ್‌ಇಡಿಗೆ ಪರಿವರ್ತಿಸುವಂತೆಕೇಂದ್ರ ಲೋಕೋಪಯೋಗಿ ಇಲಾಖೆ (ಸಿಪಿಡಬ್ಲ್ಯೂಡಿ) ಎಲ್ಲ ಅಧಿಕಾರಿಗಳಿಗೂ ಸೂಚನೆ ನೀಡಿದೆ.

ಕೇಂದ್ರ ವಸತಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಅಡಿಯಲ್ಲಿ ಕೇಂದ್ರ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಹಿಸುತ್ತದೆ. ಇದರ ವ್ಯಾಪ್ತಿಗೆ ಒಳಪಡುವ 1,241 ಕಟ್ಟಡಗಳಲ್ಲಿ ಆದಷ್ಟು ಬೇಗ ಈ ಕೆಲಸ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ಈಗಾಗಲೇ 223 ಕಟ್ಟಡಗಳಲ್ಲಿ ಎಲ್‌ಇಡಿಗೆ ಪರಿವರ್ತಿಸುವ ಕೆಲಸ ಪೂರ್ಣಗೊಂಡಿದ್ದು, 230 ಕಟ್ಟಡಗಳಲ್ಲಿ ಕೆಲಸ ನಡೆಯುತ್ತಿದೆ.

ಕೇಂದ್ರ ಸರ್ಕಾರದ ಎಲ್ಲ ಕಟ್ಟಡಗಳ ನಿರ್ವಹಣೆ ಹಾಗೂ ಅಂತರರಾಷ್ಟ್ರೀಯ ಗಡಿಗಳಲ್ಲಿ ಬೇಲಿ ಹಾಕುವ ಕೆಲಸವನ್ನು ಸಿಪಿಡಬ್ಲ್ಯೂಡಿ ನಿರ್ವಹಿಸುತ್ತದೆ. ಇದಲ್ಲದೇ, ಸ್ನೇಹಹಸ್ತ ಕಾರ್ಯಕ್ರಮಗಳ ಅಡಿಯಲ್ಲಿ ವಿದೇಶಗಳಲ್ಲಿ ಕೂಡ ಭಾರತ ಸರ್ಕಾರದ ನೆರವಿನೊಂದಿಗೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.