ನವದೆಹಲಿ: ‘ಕೋವಿನ್’ ವೇದಿಕೆಯಲ್ಲಿ ನೋಂದಣೆ ಮಾಡಿದ್ದ ಫಲಾನುಭವಿಗಳ ದತ್ತಾಂಶ ಸೋರಿಕೆಯಾಗಿದೆ ಎಂಬ ವರದಿಯು ‘ಯಾವುದೇ ಆಧಾರವಿಲ್ಲದ್ದು’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಸ್ಪಷ್ಟಪಡಿಸಿದೆ.

ಈ ವಿಚಾರವಾಗಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ಗೆ (ಸಿಇಆರ್ಟಿ -ಇನ್) ಮನವಿ ಮಾಡಿದೆ.

ಕೋವಿನ್ ಪೋರ್ಟಲ್ ಸಂಪೂರ್ಣ ಸುರಕ್ಷಿತವಾಗಿದ್ದು, ದತ್ತಾಂಶ ಗೋಪ್ಯತೆಗಾಗಿ ಹಲವು ಸುರಕ್ಷಿತ ಮಾರ್ಗಗಳನ್ನು ಅಳವಡಿಸಲಾಗಿದೆ. ಆದರೂ ದತ್ತಾಂಶಗಳ ಸುರಕ್ಷತೆಯ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದೂ ಸಚಿವಾಲಯ ತಿಳಿಸಿದೆ.

ಕೋವಿನ್ ಪೋರ್ಟಲ್ನಲ್ಲಿ ಸಂಗ್ರಹವಾಗಿದ್ದ ಕೋವಿಡ್ ಲಸಿಕೆ ಪಡೆದುಕೊಂಡಿರುವವರ ಮಾಹಿತಿಯು ಸೋರಿಕೆಯಾಗಿದೆ ಎಂದು ಈಚೆಗೆ ವರದಿಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.