ನವದೆಹಲಿ: ಭಾನುವಾರ ನಡೆದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ (ನೀಟ್–2024) ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ ಎಂದು ನ್ಯಾಷನಲ್ ಟೆಸ್ಟಿಂಗ್ ಏಜನ್ಸಿ (NTA) ಸ್ಪಷ್ಟಪಡಿಸಿದೆ.

ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ವದಂತಿಗಳು ಎದ್ದಿದ್ದವು. ಅನೇಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆಯ ತುಣುಕುಗಳು ಹರಿದಾಡಿದ್ದವು.

ಈ ವಿಷಯವಾಗಿ ಪ್ರತಿಕ್ರಿಯಿಸಿರುವ ಎನ್ಟಿಎ, ಜಾಲತಾಣಗಳಲ್ಲಿ ಹರಿದಾಡಿರುವ ಪ್ರಶ್ನೆಪತ್ರಿಕೆಗೂ ನೀಟ್ 2024ರ ಪ್ರಶ್ನೆಪತ್ರಿಕೆಗೂ ಯಾವುದೇ ಸಂಬಂಧವಿಲ್ಲ. ಯಾವುದೇ ರೀತಿಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ. ಪರೀಕ್ಷೆ ಸುಗಮವಾಗಿ ನಡೆದಿದೆ. ಆರೋಪಗಳಿಗೆ ಯಾವುದೇ ದಾಖಲೆಗಳಿಲ್ಲ. ಆಧಾರರಹಿತ ಆರೋಪಗಳನ್ನು ಮಾಡಬಾರದು ಎಂದು ತಿಳಿಸಿದೆ.

‘ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸಲೂ ಯಾರಿಗೂ ಅವಕಾಶ ಇಲ್ಲ. ಸಿಸಿಟಿವಿ ಕಣ್ಗಾವಲಿನಲ್ಲಿ ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆದಿದೆ’ ಎಂದು ಎನ್ಟಿಎ ಹಿರಿಯ ನಿರ್ದೇಶಕಿ ಸಾಧನಾ ಪರಿಚಾರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ದೇಶದ 571 ನಗರಗಳ ಹಾಗೂ ಹೊರದೇಶದ 14 ನಗರಗಳ ಒಟ್ಟು 4,750 ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆದಿದೆ.

ದೇಶದ ಸರ್ಕಾರಿ, ಖಾಸಗಿ ಹಾಗೂ ಹೊರದೇಶದ ಕೆಲವು ಕಾಲೇಜುಗಳಲ್ಲಿ ವೈದ್ಯಕೀಯ ಪದವಿ ಕೋರ್ಸ್ಗಾಗಿ ನ್ಯಾಷನಲ್ ಟೆಸ್ಟಿಂಗ್ ಏಜನ್ಸಿ ನೀಟ್ ಪರೀಕ್ಷೆ ನಡೆಸುತ್ತದೆ.
.ನಿಮ್ಮ ಪ್ರಶ್ನೆಗೆ ತಜ್ಞರ ಉತ್ತರ: ನೀಟ್, ಎನ್ಇಟಿ ತಯಾರಿ ಹೀಗಿರಲಿ....‘ನೀಟ್’ ಒಎಂಆರ್ ಶೀಟ್ ದುರ್ಬಳಕೆ: ದೆಹಲಿ ಹೈಕೋರ್ಟ್ ಆಘಾತ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.