ನವದೆಹಲಿ: ಮಾಧ್ಯಮಗಳ ಸ್ವಾತಂತ್ರ್ಯ ಮತ್ತು ವರದಿಗಾರಿಕೆ ನಡುವೆ ಸಮತೋಲನವಿರಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸಲಹೆ ಮಾಡಿದೆ.

ಬಿಹಾರದ ಮುಜಫ್ಫರನಗರ ಬಾಲಮಂದಿರ ಅತ್ಯಾಚಾರ ಪ್ರಕರಣ ಕುರಿತ ವರದಿಗಾರಿಕೆಗೆ ಪಟ್ನಾ ಹೈಕೋರ್ಟ್ ತಡೆಯಾಜ್ಞೆ ಪ್ರಶ್ನಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ರೀತಿ ಹೇಳಿದೆ.

ಪಟ್ನಾ ಹೈಕೋರ್ಟ್ ಆದೇಶದಿಂದ ಮಾಧ್ಯಮಗಳ ಸ್ವಾತಂತ್ರ್ಯ ಮತ್ತು ಮಾಹಿತಿ ಪಡೆಯುವ ಜನರ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪತ್ರಕರ್ತೆ ನಿವೇದಿತಾ ಝಾ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠವು ಬಿಹಾರ ಸರ್ಕಾರ ಮತ್ತು ಸಿಬಿಐಗೆ ನೋಟಿಸ್ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.