ನವದೆಹಲಿ: ಭಾರತದ 74ನೇ ಗಣರಾಜ್ಯೋತ್ಸವದ ಅಂಗವಾಗಿ ಗೂಗಲ್ ಸಂಸ್ಥೆ ವಿಶೇಷವಾದ ಡೂಡಲ್ ಪ್ರಕಟಿಸುವ ಮೂಲಕ ಗೌರವ ಸಲ್ಲಿಸಿದೆ.

ಗುಜರಾತ್ ಮೂಲದ ಕಲಾವಿದ ಪಾರ್ಥ್ ಕೊಥೇಕರ್ ಅವರು, ಭಾರತದ ಗಣರಾಜ್ಯೋತ್ಸವದ ಅಂಗವಾಗಿ ರಚಿಸಿದ ಕಾಗದದ ಕಲಾಕೃತಿಯನ್ನು ಗೂಗಲ್ ಹಂಚಿಕೊಂಡಿದೆ.

1950 ಜನವರಿ 26 ರಂದು ಭಾರತವು ಸಂವಿಧಾನದ ಅಂಗೀಕಾರದೊಂದಿಗೆ ಸಾರ್ವಭೌಮ, ಪ್ರಜಾಪ್ರಭುತ್ವ ಮತ್ತು ಗಣರಾಜ್ಯವೆಂದು ಘೋಷಿಸಿಕೊಂಡಿತು. ಈ ವಿಶೇಷ ದಿನವನ್ನು ಸ್ಮರಿಸಿರುವ ಗೂಗಲ್ ದೇಶದ ಜನತೆಗೆ ಶುಭಕೋರಿದೆ.

ಗೂಗಲ್ ತನ್ನ ಮುಖಪುಟದಲ್ಲಿ ಹಂಚಿಕೊಂಡ ಕಲಾಕೃತಿಯನ್ನು ಕೈಗಳಿಂದ ಕತ್ತರಿಸಿದ ಕಾಗದದಿಂದ ರಚಿಸಲಾಗಿದೆ. ಇದರಲ್ಲಿ ರಾಷ್ಟ್ರಪತಿ ಭವನ, ಇಂಡಿಯಾ ಗೇಟ್, ಸಿಆರ್ಎಫ್ಪಿ ಕವಾಯತು ತಂಡ ಮತ್ತು ಮೋಟಾರ್ ಸೈಕಲ್ ಸವಾರರು ಸೇರಿದಂತೆ ಗಣರಾಜ್ಯೋತ್ಸವದ ಪರೇಡ್ ಬಿಂಬಿಸುವ ಹಲವು ಅಂಶಗಳನ್ನು ಕಾಣಬಹುದಾಗಿದೆ.

ದೇಶದಲ್ಲಿ ಗಣರಾಜ್ಯೋತ್ಸವ ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕರ್ತವ್ಯ ಪಥದಲ್ಲಿ ಆಕರ್ಷಕ ಮಿಲಿಟರಿ ಮತ್ತು ಸಾಂಸ್ಕೃತಿಕ ವೈಭವ ಪ್ರದರ್ಶನ ನಡೆಯಲಿದ್ದು, ಹಲವು ರಾಜ್ಯಗಳ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು ಪ್ರತಿನಿಧಿಸುವ ಸ್ತಬ್ಧಚಿತ್ರ ಮೆರವಣಿಗೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.