ನವದೆಹಲಿ: 26/11 ಮುಂಬೈ ಉಗ್ರ ದಾಳಿಯಲ್ಲಿ ಹುತಾತ್ಮರಾದ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥಹೇಮಂತ್ ಕರ್ಕರೆ ಸಾವನ್ನಪ್ಪಿದ್ದು ನನ್ನ ಶಾಪದಿಂದ ಎಂದ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಹೇಳಿಕೆಯನ್ನು ಐಪಿಎಸ್ ಅಧಿಕಾರಿಗಳ ಸಂಘ ಖಂಡಿಸಿದೆ.

ಇದನ್ನೂ ಓದಿ:ಹೇಮಂತ್ ಕರ್ಕರೆ ಸತ್ತಿದ್ದು ನನ್ನ ಶಾಪದಿಂದ: ಬಿಜೆಪಿ ನಾಯಕಿ ಸಾಧ್ವಿ ಪ್ರಗ್ಯಾ

ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಸಾಧ್ವಿ ಪ್ರಗ್ಯಾ ಸಿಂಗ್, ನೀನು ಸರ್ವನಾಶ ಆಗುತ್ತೀಯಾ ಎಂದು ನಾನು ಕರ್ಕರೆ ಅವರಿಗೆ ಶಪಿಸಿದ್ದೆ, ಆ ಶಾಪ ಅವರಿಗೆ ತಟ್ಟಿತು ಎಂಬ ಹೇಳಿಕೆ ನೀಡಿದ್ದಾರೆ.

ಈ ಹೇಳಿಕೆಯನ್ನು ಖಂಡಿಸಿದ ಇಂಡಿಯನ್ ಪೊಲೀಸ್ ಸರ್ವೀಸ್ ಅಸೋಸಿಯೇಷನ್, ಅಶೋಕ್ ಚಕ್ರ ಪುರಸ್ಕೃತ ಹೇಮಂತ್ ಕರ್ಕರೆಐಪಿಎಸ್ ಅವರುಉಗ್ರರೊಂದಿಗೆ ಹೋರಾಡಿ ಪ್ರಾಣ ತ್ಯಾಗ ಮಾಡಿದ್ದಾರೆ. ಹುತಾತ್ಮರ ಬಲಿದಾನವನ್ನು ಅವಮಾನಿಸಿದ ಅಭ್ಯರ್ಥಿಯ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದುಟ್ವೀಟಿಸಿದೆ.

ಅಭ್ಯರ್ಥಿಯೊಬ್ಬರು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ಈ ರೀತಿ ಅವಮಾನಿಸಿರುವುದು ತುಂಬಾ ದುಃಖವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.