ಕೋಲ್ಕತ್ತ: ಇಲ್ಲಿನ ಆರ್.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕೆ ಆಗ್ರಹಿಸಿ ವೈದ್ಯರು ನಡೆಸುತ್ತಿರುವ ಆಮರಣಾಂತ ಉಪವಾಸ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆನಿರತರನ್ನು ಬೆಂಬಲಿಸಿ ಜನರು ಭಾನುವಾರ ಸಾಂಕೇತಿಕವಾಗಿ ಅರ್ಧ ದಿನ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.

ಆಮರಣಾಂತ ಉಪವಾಸ ನಡೆಸುತ್ತಿರುವ ಮೂವರು ಕಿರಿಯ ವೈದ್ಯರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಸ್ಥಿತಿ ಕೈಮೀರುತ್ತಿದ್ದರೂ ಪಶ್ಚಿಮ ಬಂಗಾಳ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಕಿರಿಯ ವೈದ್ಯರ ಸಂಘಟನೆ ಹೇಳಿದೆ.

ಆಮರಣಾಂತ ಉಪವಾಸ ಕೈಗೊಂಡಿರುವವರಿಗೆ ಬೆಂಬಲ ನೀಡುವ ಸಲುವಾಗಿ ಆರ್.ಜಿ.ಕರ್ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಭಾನುವಾರ ಪ್ರತಿಭಟನೆಗೆ ಧುಮುಕಿದ್ದಾರೆ. ಕೇಂದ್ರ ಕೈಗಾರಿಕಾ ಭದ್ರತಾ ಸಿಬ್ಬಂದಿಯ (ಸಿಐಎಸ್ಎಫ್) ಪ್ರತಿರೋಧವನ್ನೂ ಲೆಕ್ಕಿಸದೆ, ಸಾಂಕೇತಿಕವಾಗಿ ಅರ್ಧ ದಿನ ಉಪವಾಸ ನಡೆಸಿದ್ದಾರೆ.

ಮಾಲ್ಡಾ ಮತ್ತು ಮುರ್ಶಿದಾಬಾದ್ ಜಿಲ್ಲೆಯಲ್ಲಿಯೂ ಸಾಂಕೇತಿಕ ಉಪವಾಸ ಮಾಡುವ ಮೂಲಕ ಜನರು ವೈದ್ಯರ ಪ್ರತಿಭಟನೆಯನ್ನು ಬೆಂಬಲಿಸಿದ್ದಾರೆ. ಜನರು ಅಡುಗೆ ಮಾಡದೆ, ತಾವು ನಡೆಸುತ್ತಿರುವ ಆಮರಣಾಂತ ಉಪವಾಸಕ್ಕೆ ಸಹಮತ ಸೂಚಿಸಬೇಕು ಎಂದು ಪ್ರತಿಭಟನೆನಿರತ ವೈದ್ಯರು ಮನವಿ ಮಾಡಿದ್ದರು.

ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ– ಕೊಲೆ ಪ್ರಕರಣ ನಿಭಾಯಿಸಲು ಪಶ್ಚಿಮ ಬಂಗಾಳ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ವೈದ್ಯರು ಸಾಮೂಹಿಕ ರಾಜೀನಾಮೆ ನೀಡುತ್ತಿರುವುದು ಮುಂದುವರೆದಿದೆ. ಕಲ್ಯಾಣಿ ಜೆ.ಎನ್.ಎಂ ಆಸ್ಪತ್ರೆಯ 75ಕ್ಕೂ ಹೆಚ್ಚು ಹಿರಿಯ ವೈದ್ಯರು ಸಾಮೂಹಿಕ ರಾಜೀನಾಮೆ ನೀಡುವುದಾಗಿ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಭಾನುವಾರ ಎಚ್ಚರಿಸಿದ್ದಾರೆ. ಈ ಬಗ್ಗೆ ಪಶ್ಚಿಮ ಬಂಗಾಳ ಆರೋಗ್ಯ ವಿಶ್ವವಿದ್ಯಾಲಯದ ಕುಲಸಚಿವರಿಗೆ ಇ–ಮೇಲ್ ಬರೆದಿದ್ದು ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗದಿರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ‘ಪ್ರಸಕ್ತ ಬೆಳವಣಿಗೆಗಳಿಂದ ನಾವು ಸ್ಥೈರ್ಯ ಕಳೆದುಕೊಂಡಿದ್ದೇವೆ. ಇಂತಹ ಸಂದಿಗ್ಧ ಮನಃಸ್ಥಿತಿಯಲ್ಲಿ ಕಾರ್ಯನಿರ್ವಹಿಸಲು ನಮ್ಮಿಂದ ಸಾಧ್ಯವಿಲ್ಲ’ ಎಂದು ಇ–ಮೇಲಿನಲ್ಲಿ ಉಲ್ಲೇಖಿಸಿದ್ದಾರೆ.

ಆಸ್ಪತ್ರೆಗೆ ನುಗ್ಗಿ ಹಲ್ಲೆ

ಯುವಕರ ಗುಂಪೊಂದು ಇಲ್ಲಿನ ಎಸ್.ಎಸ್.ಕೆ.ಎಂ ಸರ್ಕಾರಿ ಆಸ್ಪತ್ರೆಯ ಟ್ರಾಮಾ ಕೇಂದ್ರಕ್ಕೆ ನುಗ್ಗಿ ರೋಗಿಯ ಸಂಬಂಧಿಕನೊಬ್ಬನ ಮೇಲೆ ಹಲ್ಲೆ ನಡೆಸಿದೆ. ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಿಬ್ಬಂದಿಯ ಭದ್ರತೆಯ ಬಗ್ಗೆ ಪ್ರಶ್ನೆಗಳೆದ್ದಿರುವ ನಡುವೆಯೇ ಈ ಘಟನೆ ನಡೆದಿದೆ. ಹಲ್ಲೆ ನಡೆಸಿರುವ ಆರೋಪಿಗಳ ಪತ್ತೆಗೆ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಎಸ್.ಎಸ್.ಕೆ.ಎಂ ಆಸ್ಪತ್ರೆ ಮುಂಭಾಗ ಭದ್ರತೆ ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.