ಪಟ್ನಾ: ಹೊಸ ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ ಬಿಹಾರದ ಆಡಳಿತಾರೂಢ ರಾಷ್ಟ್ರೀಯ ಜನತಾದಳ ಈ ಬಗ್ಗೆ ಸ್ಪಷ್ಟನೆ ನೀಡಿದೆ.

ಶವಪೆಟ್ಟಿಗೆ ಮತ್ತು ಹೊಸ ಸಂಸತ್ ಭವನದ ಚಿತ್ರಗಳನ್ನು ಆರ್‌ಜೆಡಿಯ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಹಂಚಿಕೊಳ್ಳಲಾಗಿತ್ತು. ಇದರ ವಿರುದ್ಧ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದರು. ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ ಎಂಬ ಟೀಕೆ ವ್ಯಕ್ತವಾಗಿತ್ತು.

ಇಂಥವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಬಹುದೊಡ್ಡ ಅವಮಾನ. ಆರ್‌ಜೆಡಿ ನಾಯಕರು ಈಗ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಾರೆಯೇ? ಎಂದು ಬಿಹಾರದ ಮಾಜಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ಕೂಡ ಪ್ರಶ್ನೆ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಸಮಜಾಯಿಷಿ ನೀಡಿರುವ ಪಕ್ಷದ ನಾಯಕ ಶಕ್ತಿ ಸಿಂಗ್ ಯಾದವ್ ‘ಪ್ರಜಾಪ್ರಭುತ್ವವನ್ನು ಸಮಾಧಿ ಮಾಡಲಾಗುತ್ತಿದೆ ಎಂಬುದನ್ನು ಹೇಳಲು ಶವಪೆಟ್ಟಿಗೆಯ ಚಿತ್ರವನ್ನು ಬಳಸಲಾಗಿತ್ತು. ಸಂಸತ್ತು ಪ್ರಜಾಪ್ರಭುತ್ವದ ದೇವಾಲಯ’ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.