ಪಟ್ನಾ: ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿ ಜತೆಗಿನ ಮೈತ್ರಿ ಕಡಿದುಕೊಂಡರೆ ಅವರ ಜೆಡಿ(ಯು) ಪಕ್ಷವನ್ನು ಅಪ್ಪಿಕೊಳ್ಳಲು ಸಿದ್ಧ ಎಂದು ಪ್ರತಿಪಕ್ಷ ಆರ್‌ಜೆಡಿ ಸೋಮವಾರ ಹೇಳಿದೆ.

ನಿತೀಶ್ ಕುಮಾರ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಮಾತುಕತೆ ನಡೆಸಿರುವುದು ಬಿಹಾರ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಬೆನ್ನಲ್ಲೇ, ಆರ್‌ಜೆಡಿ ಈ ಹೇಳಿಕೆ ನೀಡಿದೆ.

ಬಿಹಾರ ರಾಜಕಾರಣದಲ್ಲಿ ಬದಲಾವಣೆ ಸುಳಿವು?: ಸೋನಿಯಾ ಜತೆ ನಿತೀಶ್ ಕುಮಾರ್ ಮಾತುಕತೆ

ಎರಡೂ ಪಕ್ಷಗಳು (ಜೆಡಿಯು ಮತ್ತು ಆರ್‌ಜೆಡಿ) ಮಂಗಳವಾರ ಶಾಸಕರ ಸಭೆ ಕರೆದಿರುವುದು ಪರಿಸ್ಥಿತಿಯ ಸ್ಪಷ್ಟ ಸಂದೇಶವಾಗಿದೆ ಎಂದು ಆರ್‌ಜೆಡಿ ರಾಷ್ಟ್ರೀಯ ಉಪಾಧ್ಯಕ್ಷ ಶಿವಾನಂದ ತಿವಾರಿ ಹೇಳಿದ್ದಾರೆ.

ಕಾಂಗ್ರೆಸ್ ಕೂಡ ಮಂಗಳವಾರ ಶಾಸಕರ ಸಭೆ ಕರೆದಿದೆ ಎಂದೂ ವರದಿಯಾಗಿದೆ.

‘ಏನು ನಡೆಯುತ್ತಿದೆ ಎಂಬುದು ವೈಯಕ್ತಿಕವಾಗಿ ನನಗೆ ತಿಳಿದಿಲ್ಲ. ಆದರೆ, ಉಭಯ ಪಕ್ಷಗಳು ಜತೆಗೂಡಿದರೆ ಸರ್ಕಾರ ರಚನೆಗೆ ಬೇಕಿರುವ ಸಂಖ್ಯಾಬಲ ಇರುವುದನ್ನು ಅಲ್ಲಗಳೆಯುವಂತಿಲ್ಲ. ವಿಧಾನಸಭೆಯ ಅಧಿವೇಶನ ಕೇಂದ್ರೀಕೃತವಲ್ಲದಿದ್ದ ಸಂದರ್ಭದಲ್ಲಿ ಇಂತಹ ಸಭೆಗಳನ್ನು ಕರೆಯಲಾಗಿದೆ’ ಎಂದು ಅವರು ಹೇಳಿದ್ದಾರೆ.

‘ನಿತೀಶ್ ಅವರು ಎನ್‌ಡಿಎ ತೊರೆಯಲು ಬಯಸಿದರೆ, ಅವರನ್ನು ಅಪ್ಪಿಕೊಳ್ಳುವುದನ್ನು ಬಿಟ್ಟು ನಮಗೆ ಬೇರೇನು ಆಯ್ಕೆ ಇದೆ? ಮುಖ್ಯಮಂತ್ರಿಗಳು ಈ ಹೋರಾಟದಲ್ಲಿ ಭಾಗಿಯಾಗಲು ಬಯಸಿದರೆ ನಾವು ಅವರನ್ನು ಮುಂದಕ್ಕೆ ಕರೆದೊಯ್ಯಲಿದ್ದೇವೆ’ ಎಂದು ತಿವಾರಿ ಹೇಳಿದ್ದಾರೆ.

ಬಿಹಾರ ರಾಜಕೀಯ ಬೆಳವಣಿಗೆ: ನಾಳೆ ಜೆಡಿಯು ಸಭೆ ಕರೆದ ಸಿಎಂ ನಿತೀಶ್ ಕುಮಾರ್

ಹಿಂದೆ ನಿತೀಶ್ ಜತೆಗಿನ ಮೈತ್ರಿ ಸರ್ಕಾರ ಇದ್ದಾಗ ನಡೆದುದನ್ನು ಮರೆಯಲು ಸಿದ್ಧರಿದ್ದೀರಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕೀಯದಲ್ಲಿ ನಾವು ಹಿಂದಿನ ಕೈದಿಗಳಾಗಿ ಉಳಿಯಲಾಗದು ಎಂದು ಹೇಳಿದ್ದಾರೆ.

ನಿತೀಶ್ ಕುಮಾರ್ ಅವರು ಭಾನುವಾರ ರಾತ್ರಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ, ಬಿಹಾರ ರಾಜಕೀಯಕ್ಕೆ ಸಂಬಂಧಿಸಿ ಹಲವು ಊಹಾಪೋಹಗಳು ಹರಿದಾಡುತ್ತಿವೆ. ಇದರ ಬೆನ್ನಲ್ಲೇ, ಮಂಗಳವಾರ ಬೆಳಿಗ್ಗೆ 9 ಗಂಟೆಗೆ ಜೆಡಿ(ಯು) ಹಾಗೂ 11 ಗಂಟೆಗೆ ಆರ್‌ಜೆಡಿ ಶಾಸಕರ ಸಭೆ ಕರೆಯಲಾಗಿದೆ.

ಕೇಂದ್ರ ಸಂಪುಟ ಸೇರಲ್ಲ: ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.