ಮುಂಬೈ: ರಾಷ್ಟ್ರೀಯ ಜನತಾ ದಳದ (ಆರ್ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ.

ಹೃದಯದ ರಕ್ತನಾಳದಲ್ಲಿ ತೊಂದರೆ ಕಾಣಿಸಿಕೊಂಡ ಪರಿಣಾಮ ಲಾಲು ಪ್ರಸಾದ್ ಅವರು ನಿನ್ನೆ(ಸೆಪ್ಟೆಂಬರ್ 10) ಇಲ್ಲಿನ ಏಷ್ಯನ್ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರು ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದು ಒಂದೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

76 ವರ್ಷದ ಲಾಲು ಪ್ರಸಾದ್ ಅವರು ಹೃದಯಕ್ಕೆ ಸಂಬಂಧಿಸಿದಂತೆ 2014, 2018 ಮತ್ತು 2023ರಲ್ಲೂ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿ ಗುಣಮುಖರಾಗಿದ್ದರು.

ಲಾಲು ಪ್ರಸಾದ್ ಅವರ ಅಭಿಮಾನಿಗಳು ಬೇಗ ಗುಣಮುಖರಾಗಲಿ ಎಂದು ಸಾಮಾಜಿಕ ಮಾಧ್ಯಮಗಳ ಮೂಲಕ ಹಾರೈಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.