ನವದೆಹಲಿ: ಉದ್ಯಮಿ ವಿಜಯ್ ಮಲ್ಯ, ನೀರವ್ ಮೋದಿ ಹಾಗೂ ಮೆಹುಲ್ ಚೋಕ್ಸಿ ಅವರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ₹18,000 ಕೋಟಿ ಬ್ಯಾಂಕ್ಗಳಿಗೆ ವಾಪಸಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ಬುಧವಾರ ಮಾಹಿತಿ ನೀಡಿದೆ.

ಹಣಕಾಸು ಅಕ್ರಮ ವರ್ಗಾವಣೆ ತಡೆ ಕಾಯ್ದೆಗೆ (ಪಿಎಂಎಲ್ಎ) ಸಂಬಂಧಿಸಿದ ಒಟ್ಟು ₹67,000 ಕೋಟಿ ಮೊತ್ತದ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಇದಕ್ಕೆ ಸಂಬಂಧಿಸಿದ ಪ್ರಗತಿಯ ವಿವರವನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ನೇತೃತ್ವದ ಪೀಠಕ್ಕೆ ಸಲ್ಲಿಸಿದರು.

ಇಂದಿನವರೆಗೆ 4,700 ಪ್ರಕರಣಗಳತನಿಖೆಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಕೈಗೆತ್ತಿಕೊಂಡಿದೆ. ಕಳೆದ 5 ವರ್ಷಗಳಲ್ಲಿ ಇ.ಡಿ. ಪ್ರತಿ ವರ್ಷ 111ರಿಂದ 981ರಂತೆ ಪ್ರಕರಣಗಳನ್ನು ಕೈಗೆತ್ತಿಕೊಂಡಿದೆ. 2015–16ರಲ್ಲಿ 111 ಹಾಗೂ 2020–21ರಲ್ಲಿ 981 ಪ್ರಕರಣಗಳನ್ನು ಕೈಗೆತ್ತಿಕೊಂಡಿತ್ತು ಎಂದು ಮೆಹ್ತಾ ತಿಳಿಸಿದ್ದಾರೆ.

ಇದನ್ನೂ ಓದಿ:ಮಲ್ಯ, ನೀರವ್, ಚೋಕ್ಸಿ ಆಸ್ತಿ ಮಾರಾಟದಿಂದ ₹13,100 ಕೋಟಿ ವಸೂಲಿ: ನಿರ್ಮಲಾ

ಅಪರಾಧ ಕಾನೂನಿನ ಅಡಿಯಲ್ಲಿ ತನಿಖೆ, ಶೋಧ ಕಾರ್ಯ, ಆಸ್ತಿ ಮುಟ್ಟುಗೋಲು ವಿಚಾರಗಳಿಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಹೊಂದಿರುವ ಅಧಿಕಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

2016-17 ರಿಂದ 2020-21ರ ಅವಧಿಯಲ್ಲಿ ಪೊಲೀಸರು ಮತ್ತು ಇತರ ಏಜೆನ್ಸಿಗಳು ಅಂದಾಜು 33 ಲಕ್ಷ ಎಫ್ಐಆರ್ ದಾಖಲಿಸಿಕೊಂಡಿದ್ದು ಈ ಪೈಕಿ ಕೇವಲ 2,086 ಪ್ರಕರಣಗಳನ್ನು ಮಾತ್ರ ಪಿಎಂಎಲ್ಎ ಅಡಿ ತನಿಖೆಗೆ ಕೈಗೆತ್ತಿಕೊಳ್ಳಲಾಗಿದೆ ಎಂದು ಮೆಹ್ತಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.