ನವದೆಹಲಿ: ಆಗಸ್ಟ್ನಲ್ಲಿ ಭೀಕರ ಪ್ರವಾಹಕ್ಕೆ ತುತ್ತಾದ ಕೇರಳಕ್ಕೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಅಡಿ ಕೇಂದ್ರ ಸರ್ಕಾರವು ₹3,048 ಕೋಟಿ ನೀಡಲಿದೆ. ಇದಲ್ಲದೆ ಆಂಧ್ರಪ್ರದೇಶಕ್ಕೆ ₹539 ಕೋಟಿ ಹಾಗೂ ನಾಗಾಲ್ಯಾಂಡ್ಗೆ ₹131 ಕೋಟಿ ನೀಡಲು ಸಮ್ಮತಿಸಿದೆ.

ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಗುರುವಾರ ಈ ನಿರ್ಧಾರ ಕೈಗೊಂಡಿದೆ ಎಂದು ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗಾಗಿ ₹4,700 ಕೋಟಿ ನೀಡಬೇಕು ಎಂದು ಕೇರಳ ಸರ್ಕಾರವು ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಕೇರಳದ 14 ಜಿಲ್ಲೆಗಳಲ್ಲಿ ಪ್ರವಾಹಕ್ಕೆ ಸಿಲುಕಿ 488 ಮಂದಿ ಸಾವನ್ನಪ್ಪಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.