ಮುಂಬೈ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ಕೇರಳದಲ್ಲಿ ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಆರ್ಎಸ್ಎಸ್ ಬೆಂಬಲ ಸೂಚಿಸಿದೆ.

ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ನಮ್ಮ ವಿರೋಧವಿಲ್ಲ, ಆದರೆ ದೇವಾಲಯಗಳಿಗೂ ಅದರದ್ದೇ ಆದ ಸಂಪ್ರದಾಯಗಳಿವೆ. ಅದನ್ನು ಪಾಲಿಸಬೇಕು ಎಂದು ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ಜೋಷಿ ಹೇಳಿದ್ದಾರೆ.

ಮುಂಬೈನಲ್ಲಿ ನಡೆದ ಸಂಘ ಪರಿವಾರದ ಸಂಘಟನೆಗಳ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಜೋಷಿ ಈ ರೀತಿ ಹೇಳಿರುವುದಾಗಿ ಮಾತೃಭೂಮಿ ಪತ್ರಿಕೆ ವರದಿ ಮಾಡಿದೆ.

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಬರುವ ಮುನ್ನ ಎಲ್ಲ ದೇವಾಲಯಗಳಲ್ಲಿಯೂ ಮಹಿಳೆಯರ ಪ್ರವೇಶ ಅನುಮತಿ ನೀಡಬೇಕೆಂದು ಆರ್ಎಸ್ಎಸ್ಒತ್ತಾಯಿಸಿತ್ತು. ಆದರೆ ಶಬರಿಮಲೆ ತೀರ್ಪು ಬಂದ ನಂತರ ನಿಲುವು ಬದಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.