ತಿರುವನಂತಪುರ: ಏರ್ ಇಂಡಿಯಾ ಎಕ್ಸ್ಪ್ರೆಸ್ನ ವಿಮಾನ ಅಪಘಾತಕ್ಕೀಡಾದ ನಂತರ ಕೋಯಿಕ್ಕೋಡ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರನ್ವೇ ವಿಸ್ತರಣೆ ಮಾಡಬೇಕು ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

ರನ್ವೇ ವಿಸ್ತರಣೆಗೆ ಸಂಬಂಧಿಸಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ಸಲ್ಲಿಸಿದ್ದ ಪ್ರಸ್ತಾವನೆ ಬಹಳ ವರ್ಷಗಳಿಂದ ದೂಳು ತಿನ್ನುತ್ತಿದೆ.

ರನ್ವೇ ವಿಸ್ತರಣೆಗೆ ಈ ಮೊದಲು 450 ಎಕರೆ ಅಗತ್ಯ ಎಂಬ ಬೇಡಿಕೆ ಸಲ್ಲಿಸಿದ್ದ ಎಎಐ, ನಂತರ ಅದನ್ನು 135 ಎಕರೆಗೆ ಕಡಿಮೆ ಮಾಡಿ ಪರಿಷ್ಕೃತ ಪ್ರಸ್ತಾವನೆ ಸಲ್ಲಿಸಿದೆ. ಆದರೆ,ಜನರ ವಿರೋಧ, ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದಾಗಿ ಭೂ ಸ್ವಾಧೀನಕ್ಕೆ ತೀವ್ರ ಹಿನ್ನಡೆಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಆಡಳಿತಾರೂಢ ಸಿಪಿಎಂ ನೇತೃತ್ವದ ಮೈತ್ರಿ ಸರ್ಕಾರ ಕಣ್ಣೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಿದ್ದು, ಕೋಯಿಕ್ಕೋಡ್ ವಿಮಾನ ನಿಲ್ದಾಣ ರನ್ವೇ ವಿಸ್ತರಣೆ ವಿಳಂಬವಾಗಲು ಇದೂ ಸಹ ಕಾರಣ ಎಂಬ ಆರೋಪ ಕೇಳಿ ಬರುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.