ಪಟ್ಟಣಂತಿಟ್ಟ:ಕೋವಿಡ್-19 ಸಾಂಕ್ರಾಮಿಕದ ಕಾರಣದಿಂದಾಗಿ ಮುಚ್ಚಲಾಗಿರುವ ಕೇರಳದ ಶಬರಿಮಲೆ ದೇಗುಲದ ಬಾಗಿಲನ್ನು ತಿಂಗಳ ಪೂಜೆ ಸಲುವಾಗಿ ಐದು ದಿನ ತೆರೆಯಲು ಅನುಮತಿಸಲಾಗಿದೆ.

ಇಂದಿನಿಂದ ಜುಲೈ 21 ರವರೆಗೆ ದೇವಾಲಯ ತೆರೆದಿರುತ್ತದೆ. ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು.ಆನ್‌ಲೈನ್ ಬುಕಿಂಗ್ ವ್ಯವಸ್ಥೆ ಮೂಲಕಗರಿಷ್ಠ5,000 ಭಕ್ತರಿಗೆ ಮಾತ್ರವೇ ಅವಕಾಶ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.

ದೇವಾಲಯಕ್ಕೆ ಭೇಟಿ ನೀಡುವವರು ಕೋವಿಡ್ ಲಸಿಕೆ ಪ್ರಮಾಣಪತ್ರ ಅಥವಾ ದೇವಾಯಲಕ್ಕೆ ಭೇಟಿ ನೀಡುವ48 ಗಂಟೆ ಮೊದಲು ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿದ ನೆಗೆಟಿವ್ ವರದಿ ಸಲ್ಲಿಸುವುದು ಕಡ್ಡಾಯವಾಗಿದೆ.

ದೇಶದಲ್ಲಿಕೋವಿಡ್ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಂಡ ರಾಜ್ಯಗಳಲ್ಲಿ ಕೇರಳವೂಒಂದಾಗಿದೆ. ಎರಡನೇ ಅಲೆಯಿಂದ ಸೋಂಕು ಪ್ರಕರಣಗಳ ಏರಿಕೆಯಾಗುವುದನ್ನು ತಡೆಯಲು ಏಪ್ರಿಲ್‌ನಲ್ಲಿ ಲಾಕ್‌ಡೌನ್ ಜಾರಿಗೊಳಿಸಲಾಗಿತ್ತು. ಇದೀಗಪರಿಸ್ಥಿತಿ ಸುಧಾರಿಸುತ್ತಿದೆ. ಕಳೆದ ಕೆಲವು ದಿನಗಳಿಂದ ದೈನಂದಿನ ಹೊಸ ಪ್ರಕರಣಗಳ ಸಂಖ್ಯೆ 10 ಸಾವಿರದಿಂದ 15 ಸಾವಿರದ ಆಸುಪಾಸಿನಲ್ಲಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇನ್ನೂ1,22,436 ಸಕ್ರಿಯ ಪ್ರಕರಣಗಳಿವೆ. ಈವರೆಗೆ29,93,242 ಸೋಂಕಿತರು ಚೇತರಿಸಿಕೊಂಡಿದ್ದಾರೆ.15,155 ಮಂದಿ ಕೋವಿಡ್‌ನಿಂದಾಗಿ ಸಾವಿಗೀಡಾಗಿದ್ದಾರೆ. ಗುರುವಾರ13,773 ಹೊಸ ಪ್ರಕರಣಗಳು ವರದಿಯಾಗಿದ್ದವು.ಸದ್ಯ ವಾರಾಂತ್ಯ ಲಾಕ್‌ಡೌನ್ ಜಾರಿಯಲ್ಲಿದೆ.

ಲಸಿಕೆ ಅಭಿಯಾನದ ಭಾಗವಾಗಿ ರಾಜ್ಯದಲ್ಲಿ 1,64,86,091 ಡೋಸ್ ವಿತರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.