ನವದೆಹಲಿ: ಇತ್ತೀಚೆಗೆ ದೆಹಲಿಯ ಇಂದ್ರಪ್ರಸ್ಥದ ಅಪೊಲೊ ಆಸ್ಪತ್ರೆಯಲ್ಲಿ ತುರ್ತು ಮಿದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ, ಈಶಾ ಫೌಂಡೇಶನ್ ಸಂಸ್ಥಾಪಕ, ಆಧ್ಯಾತ್ಮಿಕ ನಾಯಕ ಜಗ್ಗಿ ವಾಸುದೇವ್ ಅವರು ಚೇತರಿಸಿಕೊಳ್ಳುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ.

‘ಸದ್ಗುರು ಚೇತರಿಸಿಕೊಳ್ಳುವ ಹಾದಿಯಲ್ಲಿದ್ದಾರೆ’ ಎಂದು ಕ್ಯಾಪ್ಶನ್ ನೀಡಲಾಗಿದ್ದು, ಸದ್ಗುರು ಅವರು ಆಸ್ಪತ್ರೆಯ ಹಾಸಿಗೆಯ ಮೇಲೆ ಕುಳಿತು ದಿನಪತ್ರಿಕೆ ಓದುತ್ತಿರುವ ದೃಶ್ಯವನ್ನು ವಿಡಿಯೊದಲ್ಲಿ ಕಾಣಬಹುದು.

ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ವಿಡಿಯೊಗೆ ಸಾವಿರಾರು ಜನ ಕಾಮೆಂಟ್ ಮಾಡಿದ್ದು, ಬೇಗ ಹುಶಾರಾಗುವಂತೆ ಶುಭ ಹಾರೈಸಿದ್ದಾರೆ.

ಮಿದುಳಿಗೆ ರಕ್ಷಾ ಕವಚದಂತಿರುವ ಸ್ನಾಯುವಿನಲ್ಲಿ ರಕ್ತ ಸಂಗ್ರಹಗೊಂಡಿದ್ದರಿಂದಾಗಿ ಬಳಲುತ್ತಿದ್ದ ಸದ್ಗುರು ಅವರಿಗೆ ಮಾರ್ಚ್ 17ರಂದು ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.