ಅಹಮದಾಬಾದ್: ಗುಜರಾತ್ನ ಮೊರ್ಬಿ ಸೇತುವೆ ದುರಂತದ ಕುರಿತು ಸುಳ್ಳು ಟ್ವೀಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ವಕ್ತಾರ ಸಾಕೇತ್ ಗೋಖಲೆ ಅವರಿಗೆ ಅಹಮದಾಬಾದ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿತು.

ಆದರೆ ಮತ್ತೊಂದು ಪ್ರಕರಣದಲ್ಲಿ ಸಾಕೇತ್ ಅವರನ್ನು ಮೊರ್ಬಿ ಪೊಲೀಸರು ಮತ್ತೆ ಬಂಧಿಸಿದ್ದಾರೆ.

ಇದನ್ನೂ ಓದಿ:ಲಂಚ: ಬಂಧಿತ ರೈಲ್ವೇ ಅಧಿಕಾರಿಯಿಂದ ₹1.38 ಕೋಟಿ ನಗದು ವಶಪಡಿಸಿಕೊಂಡ ಸಿಬಿಐ

ಈ ಕುರಿತು ಟ್ವೀಟ್ ಮಾಡಿರುವ ಟಿಎಂಸಿ, ಸಾಕೇತ್ ಗೋಖಲೆ ಅವರನ್ನು ಬಿಡುಗಡೆ ಮಾಡಿದ ಕೆಲವೇ ಹೊತ್ತಿನಲ್ಲಿ ಯಾವುದೇ ಕಾರಣವಿಲ್ಲದೆ ಮತ್ತೆ ಬಂಧಿಸಲಾಗಿದೆ. ದೇಶದ ಜನರ ಪ್ರಜಾಸತ್ತಾತ್ಮಕ ಹಕ್ಕುಗಳು ಅಪಾಯದಲ್ಲಿದ್ದು, ಗೋಖಲೆ ಬಿಡುಗಡೆಗೆ ಒತ್ತಾಯಿಸುತ್ತೇವೆ ಎಂದು ಹೇಳಿದೆ.

ಅಲ್ಲದೆ ಗುಜರಾತ್ಗೆ ಮೂವರು ಸದಸ್ಯರ ನಿಯೋಗವನ್ನು ಕಳುಹಿಸಲು ಟಿಎಂಸಿ ನಿರ್ಧರಿಸಿದೆ.

135 ಜನರನ್ನು ಬಲಿ ತೆಗೆದುಕೊಂಡ ಮೊರ್ಬಿ ತೂಗು ಸೇತುವೆ ದುರಂತದಲ್ಲಿ ಬದುಕುಳಿದವರನ್ನು ಪ್ರಧಾನಿ ಮೋದಿ ಭೇಟಿಯಾಗಲು 30 ಕೋಟಿ ವ್ಯಯಿಸಲಾಗಿದೆ ಎಂದು ಸುಳ್ಳು ಸುದ್ದಿ ಟ್ವೀಟ್ ಮಾಡಿದ್ದ ಆರೋಪದ ಮೇಲೆ ಸಾಕೇತ್ ಅವರನ್ನು ಡಿಸೆಂಬರ್ 6ರಂದು ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.