ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಶೂಟರ್‌ಗಳಿಗೆ ಪಿಸ್ತೂಲ್ ಮತ್ತು ಮದ್ದುಗುಂಡು ಪೂರೈಸಿದ ಆರೋಪದಲ್ಲಿ ಮುಂಬೈ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದ ಆರೋಪಿಯೊಬ್ಬ ಬುಧವಾರ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅನೂಜ್ ತಪನ್ (23) ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಪೊಲೀಸ್ ಕಸ್ಟಡಿಯಲ್ಲಿದ್ದ ಈತ ಶೌಚಾಲಯದಲ್ಲಿ ನೇಣು ಬಿಗಿದುಕೊಂಡಿದ್ದ. ಇದನ್ನು ಗಮನಿಸಿದ ಪೊಲೀಸರು ತಕ್ಷಣವೇ ಆತನನ್ನು ಆಸ್ಪತ್ರೆಗೆ ಸಾಗಿಸಿದ್ದರು. ಚಿಕಿತ್ಸೆ ನೀಡುವಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ದಕ್ಷಿಣ ಮುಂಬೈನ ಆಜಾದ್ ಮೈದಾನ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಾಗಿದೆ. ಶೂಟರ್‌ಗಳಾದ ಸಾಗರ್ ಪಾಲ್ ಮತ್ತು ವಿಕಿ ಗುಪ್ತಾ ಅವರಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದ ಆರೋಪದ ಮೇಲೆ ಇನ್ನೊಬ್ಬ ಆರೋಪಿ ಸೋನು ಕುಮಾರ್ ಬಿಷ್ಣೋಯಿ ಜತೆಗೆ ಅನೂಜ್ ತಪನ್‌ನನ್ನು ಪಂಜಾಬ್‌ನಿಂದ ಬಂಧಿಸಲಾಗಿತ್ತು.
.ಸಲ್ಮಾನ್ ಖಾನ್ ನಿವಾಸದ ಬಳಿ ದಾಳಿ: ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್ ಔಟ್ ನೋಟಿಸ್.ಸಲ್ಮಾನ್ ನಿವಾಸದ ಬಳಿ ದಾಳಿ: ಬಂಧಿತ ಮತ್ತಿಬ್ಬರು ಏ.30ರವರೆಗೆ ಕಸ್ಟಡಿಗೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.