ನವದೆಹಲಿ: ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಿತ್ರೋಡಾ ಅವರ ರಾಜೀನಾಮೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವೀಕರಿಸಿದ್ದಾರೆ. ಸ್ಯಾಮ್ ಪಿತ್ರೋಡಾ ಅವರು ಸ್ವಂತ ನಿರ್ಧಾರದಿಂದ ರಾಜೀನಾಮೆ ನೀಡಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಲೋಕಸಭಾ ಚುನಾವಣೆಯ ನಡುವೆ ದೇಶದ ವಿವಿಧ ಭಾಗಗಳ ಭಾರತೀಯರು ಹೇಗೆ ಕಾಣುತ್ತಾರೆ ಎನ್ನುವ ಬಗ್ಗೆ ಸಂದರ್ಶನವೊಂದರಲ್ಲಿ ಪಿತ್ರೋಡಾ ನೀಡಿದ್ದ ಹೇಳಿಕೆ ರಾಜಕೀಯ ವಿವಾದವನ್ನು ಸೃಷ್ಟಿಸಿತ್ತು. ಪಿತ್ರೋಡಾ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರೂ ಖಂಡಿಸಿದ್ದರು.
.ಪೂರ್ವ ಭಾರತದ ಜನ ಚೀನಿಯರು, ದಕ್ಷಿಣದವರು ಆಫ್ರಿಕನ್ನರಂತೆ ಕಾಣುತ್ತಾರೆ: ಪಿತ್ರೋಡಾ.ಭಾರತೀಯರ ಕುರಿತ ಸ್ಯಾಮ್ ಪಿತ್ರೋಡಾ ಹೇಳಿಕೆ: ಅಂತರ ಕಾಯ್ದುಕೊಂಡ ಕಾಂಗ್ರೆಸ್.
ಸದ್ಯ ಅಮೆರಿಕದಲ್ಲಿ ನೆಲೆಸಿರುವ ಸ್ಯಾಮ್ ಪಿತ್ರೋಡಾ, ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಅವರ ಸಲಹಾಗಾರರಾಗಿ ಭಾರತದಲ್ಲಿ ಕೆಲಸ ಮಾಡಿದ್ದರು. 2004ರಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಭಾರತದ ರಾಷ್ಟ್ರೀಯ ಜ್ಞಾನ ಆಯೋಗದ ಮುಖ್ಯಸ್ಥರ ಹುದ್ದೆಗೆ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಪಿತ್ರೋಡಾ ಅವರನ್ನು ಆಹ್ವಾನಿಸಿದ್ದರು. 2009 ರಲ್ಲಿ, ಅವರು ಸಾರ್ವಜನಿಕ ಮಾಹಿತಿ ಮೂಲಸೌಕರ್ಯ ಕುರಿತು ಮನಮೋಹನ್ ಸಿಂಗ್ ಅವರಿಗೆ ಸಲಹೆಗಾರರಾಗಿದ್ದರು.
.ದಕ್ಷಿಣ ಭಾರತೀಯರನ್ನು ಆಫ್ರಿಕಾದವರಿಗೆ ಹೋಲಿಸಿದ್ದು ಜನಾಂಗೀಯ ನಿಂದನೆ- ವಿಜಯೇಂದ್ರ.ಧರ್ಮಕ್ಕೆ ಹೆಚ್ಚಿನ ಪ್ರಾಶಸ್ತ್ಯ, ಪ್ರಜಾಪ್ರಭುತ್ವ ಬುಡಮೇಲು: ಸ್ಯಾಮ್ ಪಿತ್ರೋಡಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.