ಲಖನೌ: ಮಸೀದಿಯೊಂದರ ಸಮೀಕ್ಷೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರವು ಚುನಾವಣಾ ದುಷ್ಕೃತ್ಯಗಳ ಕುರಿತ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಸರ್ಕಾರ ಉದ್ದೇಶಪೂರ್ವಕವಾಗಿ ಮಾಡಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಸಂಭಾಲ್ನಲ್ಲಿ ಗಂಭೀರ ಘಟನೆಯೊಂದು ನಡೆದಿದೆ. ಚುನಾವಣಾ ಕುರಿತ ಚರ್ಚೆಗಳನ್ನು ತಪ್ಪಿಸಲು ಇಂದು ಬೆಳಿಗ್ಗೆ ಸಮೀಕ್ಷಾ ತಂಡವನ್ನು ಉದ್ದೇಶಪೂರ್ವಕವಾಗಿ ಸಂಭಾಲ್ಗೆ ಕಳುಹಿಸಲಾಗಿದೆ. ಚುನಾವಣಾ ವಿಷಯಗಳ ಕುರಿತು ಚರ್ಚೆಗಳನ್ನು ನಡೆಸದಂತೆ ಅವವ್ಯಸ್ಥೆ ಸೃಷ್ಟಿಸುವುದು ಉದ್ದೇಶವಾಗಿದೆ. ಹಿಂಸಾಚಾರದಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಜನರ ಭಾವನೆಗಳನ್ನು ಕೆರಳಿಸಲು ಉದ್ದೇಶಪೂರ್ವಕವಾಗಿ ಈ ರೀತಿ ಮಾಡಲಾಗಿದೆ’ ಎಂದು ಅಖಿಲೇಶ್ ಹೇಳಿದ್ದಾರೆ.

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿರುವ ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳ ಮೇಲೆ ಸ್ಥಳೀಯರು ಇಂದು (ಭಾನುವಾರ) ಬೆಳಿಗ್ಗೆ ಕಲ್ಲು ತೂರಾಟ ನಡೆಸಿದ್ದರು. ಕಲ್ಲು ತೂರುತ್ತಿದ್ದವರನ್ನು ತಡೆಯಲು ಪೊಲೀಸರು ಅಶ್ರುವಾಯು ಸಿಡಿಸಿದ್ದರು.

ಘಟನೆಗೆ ಸಂಬಂಧಿಸಿದಂತೆ ಹತ್ತು ಮಂದಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಜಾಮಾ ಮಸೀದಿಯಿದ್ದ ಜಾಗದಲ್ಲಿ ಪುರಾತನ ಹಿಂದೂ ದೇವಾಲಯವಿತ್ತು, ಬಾಬರ್ನ ಕಾಲದಲ್ಲಿ ದೇಗುಲ ಕೆಡವಿ ಮಸೀದಿ ಕಟ್ಟಲಾಗಿದೆ. ಹಿಂದೂ ದೇಗುಲಕ್ಕೆ ಸೇರಿದ ಅನೇಕ ಗುರುತುಗಳೂ ಅಲ್ಲಿವೆ ಎಂದು ಆರೋಪಿಸಿ ವಕೀಲ ವಿಷ್ಣು ಶಂಕರ್ ಜೈನ್ ಎನ್ನುವರು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಗಣಿಸಿದ ಕೋರ್ಟ್ ವಿಡಿಯೊ ಮತ್ತು ಛಾಯಾಗ್ರಹಣ ಬಳಸಿ ಸಮೀಕ್ಷೆ ನಡೆಸುವಂತೆ ಆದೇಶ ನೀಡಿತ್ತು.
.ಉತ್ತರ ಪ್ರದೇಶ: ಜಾಮಾ ಮಸೀದಿ ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.