ನವದೆಹಲಿ: ವಿಶೇಷ ವಿವಾಹ ಕಾಯ್ದೆಯಡಿ ಸಲಿಂಗ ವಿವಾಹಕ್ಕೆ ಅನುಮತಿ ನೀಡಬೇಕು ಎಂದು ಕೋರಿ ಎಲ್ಜಿಬಿಟಿಕ್ಯೂ+ ಸಮುದಾಯದ ಸಲಿಂಗ ಜೋಡಿಯೊಂದು ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ.

ಸಲಿಂಗ ವಿವಾಹಕ್ಕೆ ಅನುಮತಿ ನೀಡಬೇಕು ಎಂದಿರುವ ಜೋಡಿಯು, ತಮ್ಮ ವಿವಾಹವನ್ನು ಕಾನೂನು ಬದ್ಧಗೊಳಿಸಬೇಕು ಎಂದು ಮನವಿ ಮಾಡಿದೆ.

ಎಲ್ಜಿಬಿಟಿಕ್ಯೂ+ ಸಮುದಾಯದ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಇಲ್ಲದಿರುವುದರ ಬಗ್ಗೆಯೂ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಎಲ್ಜಿಬಿಟಿಕ್ಯೂ+ ಸಮುದಾಯದವರು ತಮ್ಮಿಷ್ಟದವರನ್ನು ವಿವಾಹವಾಗುವ ಮೂಲಭೂತ ಹಕ್ಕನ್ನು ಜಾರಿಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಸಲಿಂಗ ವಿವಾಹವಾಗುವುದು ತಮ್ಮ ಮೂಲಭೂತ ಹಕ್ಕು ಎಂದು ಪ್ರತಿಪಾದನೆ ಮಾಡಿರುವ ಅರ್ಜಿದಾರರು, ಸಲಿಂಗ ವಿವಾಹಕ್ಕೆ ಅನುಮತಿ ನೀಡಬೇಕು ಎಂದು ಕೋರಿದ್ದಾರೆ.

ಎಲ್ಜಿಬಿಟಿಕ್ಯೂ+ ಸಮುದಾಯದವರಿಗೂ ಕೂಡ ಇತರೆ ಪ್ರಜೆಗಳಂತೆ ಮಾನವ, ಮೂಲಭೂತ ಹಾಗೂ ಸಾಂವಿಧಾನಿಕ ಹಕ್ಕುಗಳಿವೆ ಎಂದು ಸುಪ್ರಿಂ ಕೋರ್ಟ್ ಈ ಹಿಂದೆ ಪ್ರತಿಪಾದಿಸಿದ್ದನ್ನು ಅರ್ಜಿದಾರರು ಒತ್ತಿ ಹೇಳಿದ್ದಾರೆ.

‘ನಾವು ಇಬ್ಬರು ಕಳೆದ 17 ವರ್ಷಗಳಿಂದ ಪರಸ್ಪರ ಪ್ರೀತಿಸಿ, ಮದುವೆಯಾಗಿದ್ದೇವೆ. ಈಗ ನಾವು ಇಬ್ಬರು ಮಕ್ಕಳನ್ನು ಬೆಳೆಸುತ್ತಿದ್ದೇವೆ. ಆದರೆ ನಮ್ಮ ವಿವಾಹವನ್ನು ಕಾನೂನು ಬದ್ಧಗೊಳಿಸಲಾಗುತ್ತಿಲ್ಲ. ಹೀಗಾಗಿ ನಮ್ಮ ಮಕ್ಕಳ ನಡುವಿನ ಸಂಬಂಧವೂ ಕಾನೂನು ಬದ್ಧವಾಗುತ್ತಿಲ್ಲ‘ ಎಂದು ಅರ್ಜಿದಾರರು ಹೇಳಿದ್ದಾರೆ.

ಸದ್ಯ ದೇಶದಲ್ಲಿ ಸಲಿಂಗ ಕಾಮ ಕಾನೂನು ಬದ್ಧವಾಗಿದ್ದು, ಆದರೆ ಸಲಿಂಗ ವಿವಾಹಕ್ಕೆ ಯಾವುದೇ ಕಾನೂನು ಮಾನ್ಯತೆ ಇಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.