ಮುಂಬೈ: ‘ಎನ್ಸಿಬಿಯ ಮುಂಬೈ ವಲಯದ ಮಾಜಿ ಮುಖ್ಯಸ್ಥ ಸಮೀರ್ ವಾಂಖೆಡೆ ಅವರು ಶನಿವಾರ ಸಿಬಿಐ ವಿಚಾರಣೆಗೆ ಹಾಜರಾದರು’ ಎಂದು ಅಧಿಕಾರಿಗಳು ತಿಳಿಸಿದರು.

ಮುಂಬೈನ ಐಷಾರಾಮಿ ಹಡಗಿನಲ್ಲಿ ನಡೆದ ಡ್ರಗ್ಸ್ ಸೇವನೆ ಪ್ರಕರಣದಲ್ಲಿ ಆರ್ಯನ್ ಖಾನ್ ಅವರನ್ನು ಸಿಕ್ಕಿಹಾಕಿಸದಿರಲು ಬಾಲಿವುಡ್ ನಟ ಶಾರುಕ್ ಖಾನ್ ಅವರ ಬಳಿ ₹ 25 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ವಾಂಖೆಡೆ ಆರೋಪಿಯಾಗಿದ್ದಾರೆ.

‘ಸಿಬಿಐ ಕಚೇರಿಗೆ ಬೆಳಿಗ್ಗೆ 10.15ಕ್ಕೆ ವಾಂಖೆಡೆ ಆಗಮಿಸಿದರು. ಈ ವೇಳೆ ಮಾಧ್ಯಮದವರ ಮುಂದೆ, ಸತ್ಯಮೇವ ಜಯತೆ ಎಂದಷ್ಟೇ ಹೇಳಿ ಕಚೇರಿ ಒಳಗೆ ಹೋದರು’ ಎಂದು ಅವರು ಹೇಳಿದರು.

ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಸಿಬಿಐ ವಾಂಖೆಡೆ ಅವರಿಗೆ ಗುರುವಾರವೇ ಸಮನ್ಸ್ ನೀಡಿತ್ತು. ಆದರೆ ಅವರು ಅಂದಿನ ದಿನ ವಿಚಾರಣೆಗೆ ಹಾಜರಾಗಿರಲಿಲ್ಲ.

ಈ ಪ್ರಕರಣ ಮಾತ್ರವಲ್ಲದೇ, ಎನ್ಸಿಬಿಯ ದೂರನ್ನು ಆಧರಿಸಿ, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಲಂಚಕ್ಕೆ ಸಂಬಂಧಿಸಿದ ನಿಬಂಧನೆಗಳ ಅಡಿಯಲ್ಲಿ ಅಪರಾಧ ಸಂಚು ನಡೆಸಿದ ಹಾಗೂ ಲಂಚಕ್ಕಾಗಿ ಬೆದರಿಕೆ ಒಡ್ಡಿದ್ದಕ್ಕೆ ಸಂಬಂಧಿಸಿದಂತೆ, ವಾಂಖೆಡೆ ವಿರುದ್ಧ ಸಿಬಿಐ ಇನ್ನೂ ನಾಲ್ಕು ಪ್ರಕರಣಗಳನ್ನು ಮೇ 11ರಂದು ದಾಖಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.