ತಿರುವನಂತಪುರ: ನಿಫಾ ವೈರಸ್ ಸೋಂಕಿಗೆ ತುತ್ತಾಗಿ ಕಳೆದ ವಾರ ಮೃತಪಟ್ಟ 24 ವರ್ಷದ ಯುವಕನ ಸಂಪರ್ಕಕ್ಕೆ ಬಂದಿದ್ದ 13 ಮಂದಿಯ ವೈದ್ಯಕೀಯ ಪರೀಕ್ಷಾ ವರದಿ ಬಂದಿದ್ದು, ಅವರಲ್ಲಿ ನಿಫಾ ಸೋಂಕು ಪತ್ತೆಯಾಗಿಲ್ಲ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಂಗಳವಾರ ತಿಳಿಸಿದ್ದಾರೆ.

ಸೋಂಕಿತ ಯುವಕನ ಸಂಪರ್ಕಕ್ಕೆ ಬಂದಿದ್ದ ಒಟ್ಟು 175 ಜನರಲ್ಲಿ ಈ 13 ಮಂದಿಯು ಹೆಚ್ಚು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇದ್ದವರಾಗಿದ್ದರು. ಮಲಪ್ಪುರದ ಮಂಜೇರಿ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಇವರ ಮಾದರಿಯನ್ನು ಪರೀಕ್ಷಿಸಲಾಗಿತ್ತು ಎಂದು ಸಚಿವೆ ಹೇಳಿದ್ದಾರೆ.

ಆ ಯುವಕ ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಹೀಗಾಗಿ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯೊಂದಿಗೂ, ಕೇಂದ್ರ ಸರ್ಕಾರದೊಂದಿಗೂ ನಿರಂತರ ಸಂಪರ್ಕದಲ್ಲಿದ್ದು, ಅವನ ಸಂಪರ್ಕಕ್ಕೆ ಬಂದಿದ್ದ ಆತನ ಸಹಪಾಠಿಗಳು ಹಾಗೂ ಸ್ನೇಹಿತರನ್ನು ಪತ್ತೆಹಚ್ಚಿ ಸೋಂಕು ನಿರೋಧಕ ಔಷಧ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.