ಕೋಲ್ಕತ್ತ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿ ಪ್ರಕರಣದ ಮುಖ್ಯ ಆರೋಪಿಯಾಗಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡ ಶಹಜಹಾನ್ ಶೇಖ್ ಅವರನ್ನು ಬಂಧಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಸ್ಥಳೀಯರ ಭೂಮಿ ಕಬಳಿಸಿರುವ ಆರೋಪ ಶೇಖ್ ಮೇಲಿದೆ.

55 ದಿನಗಳಿಂದ ತಲೆಮರೆಸಿಕೊಂಡಿದ್ದ ಶೇಖ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸ್ ವಿಶೇಷ ಪಡೆಯು 'ಉತ್ತರ 24 ಪರಗಣ' ಜಿಲ್ಲೆಯಲ್ಲಿ ತಡರಾತ್ರಿ ಬಂಧಿಸಿದೆ. ಬಳಿಕ ಬಸಿರ್ಹತ್ ನ್ಯಾಯಾಲಯಕ್ಕೆ ಕರೆದೊಯ್ದಿದೆ.

ವಿಶೇಷ ತಂಡವು ಶೇಖ್ ಅವರ ಚಲನವಲನಗಳ ಮೇಲೆ ಹಲವು ದಿನಗಳಿಂದ ಕಣ್ಣಿಟ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರಿ ಸಂಖ್ಯೆಯ ಮಹಿಳೆಯರು ಟಿಎಂಸಿ ನಾಯಕ ಹಾಗೂ ಆತನ ಬೆಂಬಲಿಗರು, ಬಲವಂತವಾಗಿ ತಮ್ಮ ಭೂಕಬಳಿಕೆ ಮಾಡಿದ್ದಾರೆ ಮತ್ತು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿದ್ದರು. ಅದಾದ ಬಳಿಕ, 'ಉತ್ತರ 24 ಪರಗಣ' ಜಿಲ್ಲೆಯ ಸಂದೇಶ್‌ಖಾಲಿಯಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆದಿವೆ.

2019ರಲ್ಲಿ ನಡೆದ ಬಿಜೆಪಿಯ ಮೂವರು ಕಾರ್ಯಕರ್ತರ ಕೊಲೆ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿರುವ ಶೇಖ್, ಜನವರಿ 5ರಿಂದ ನಾಪತ್ತೆಯಾಗಿದ್ದರು.

ಶೇಖ್, ಪಡಿತರ ಅಕ್ರಮ ಹಾಗೂ ಭೂ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ನಡೆಸಿದ್ದಾರೆ ಎಂದು ಜಾರಿ ನಿರ್ದೇಶನಾಲಯವೂ ಪ್ರಕರಣ ದಾಖಲಿಸಿಕೊಂಡಿದೆ.
.ಶಹಜಹಾನ್ರನ್ನು ಸಿಬಿಐ, ಇ.ಡಿ ಗೂ ಬಂಧಿಸಬಹುದು: ಕಲ್ಕತ್ತಾ ಹೈಕೋರ್ಟ್.ಸಂದೇಶ್‌ಖಾಲಿ ಪ್ರಕರಣ: ಟಿಎಂಸಿಯ ಮತ್ತೊಬ್ಬ ಮುಖಂಡನ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.