ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿರುವ ವರದಿಯಲ್ಲಿ ಶಿಫಾರಸು ಮಾಡಲಾಗಿದೆ ಎಂದು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ (ಎನ್ಸಿಎಸ್ಸಿ) ಅಧ್ಯಕ್ಷ ಅರುಣ್ ಹಲ್ದಾರ್ ಶುಕ್ರವಾರ ತಿಳಿಸಿದರು.

ಸಂದೇಶ್ಖಾಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರಪತಿಗೆ ವರದಿ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಅಪರಾಧಿಗಳು ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ ಎಂದು ಆರೋಪಿಸಿದರು.

ವರದಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುರ್ಮು ಅವರು ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಕಾನೂನು ಮತ್ತು ಸುವ್ಯವಸ್ಥೆಯ ನೆಪ ಹೇಳಿ, ಹಿಂಸಾಚಾರ ನಡೆದಿರುವ ಸ್ಥಳಕ್ಕೆ ಎನ್ಸಿಎಸ್ಸಿಯ ನಿಯೋಗ ತೆರಳದಂತೆ ತಡೆಯಲು ರಾಜ್ಯ ಸರ್ಕಾರವು ಯತ್ನಿಸಿತ್ತು ಎಂದು ಆರೋಪಿಸಿರುವ ಅವರು, ಹಿಂಸಾಚಾರದಿಂದಾಗಿ ಪರಿಶಿಷ್ಟ ಜಾತಿಯವರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು.

ತುರ್ತು ಕ್ರಮಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ ಎಂದಿದ್ದಾರೆ. ಎನ್ಸಿಎಸ್ಸಿ ನಿಯೋಗವು ಗುರುವಾರ ಸಂದೇಶ್ಖಾಲಿಗೆ ಭೇಟಿ ನೀಡಿತ್ತು.

ಟಿಎಂಸಿ ನಾಯಕ ಶಹಜಹಾನ್ ಶೇಖ್ ಹಾಗೂ ಅವರ ಬೆಂಬಲಿಗರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಮತ್ತು ತಮ್ಮ ಭೂಮಿಯನ್ನು ಕಸಿದುಕೊಂಡಿದ್ದಾರೆ ಎಂದು ಅಲ್ಲಿನ ಮಹಿಳೆಯರು ನಿಯೋಗದ ಮುಂದೆ ಅಳಲು ತೋಡಿಕೊಂಡಿದ್ದರು.

ಶೇಖ್ ಅವರನ್ನು ಕೂಡಲೇ ಬಂಧಿಸಬೇಕು ಎಂದೂ ಒತ್ತಾಯಿಸಿದ್ದರು. ಶೇಖ್ ಅವರು ಜನವರಿ 5ರಿಂದ ತಲೆಮರೆಸಿಕೊಂಡಿದ್ದಾರೆ.
.ಸಂದೇಶ್ಖಾಲಿ ಹಿಂಸಾಚಾರ | ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಪೊಲೀಸ್ ವಶಕ್ಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.