ನವದೆಹಲಿ: ಸಂತೂರ್ ಮಾಂತ್ರಿಕ ಭಜನ್ ಸೊಪೋರಿ ಗುರುವಾರ ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.

ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಗುರುಗ್ರಾಮದ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಸೊಪೋರಿ ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಪುತ್ರರಾದ ಸೋರಭ್ ಮತ್ತು ಅಭಯ್, ಸಂತೂರ್ ವಾದನದಲ್ಲಿ ಹೆಸರು ಗಳಿಸಿದ್ದಾರೆ.

ಕಳೆದ ವರ್ಷದ ಜೂನ್‌ನಲ್ಲಿ ಸೊಪೋರಿ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಗುರುಗ್ರಾಮದ ಫೋರ್ಟಿಸ್ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ ಎಂದು ಪುತ್ರ ಅಭಯ್ ಸುದ್ದಿಸಂಸ್ಥೆ ‘ಪಿಟಿಐ‘ಗೆ ತಿಳಿಸಿದ್ದಾರೆ.

ಶುಕ್ರವಾರ ನವದೆಹಲಿಯ ಲೋಧಿ ರಸ್ತೆಯ ರುದ್ರಭೂಮಿಯಲ್ಲಿ ಸೊಪೋರಿ ಅವರ ಅಂತ್ಯಸಂಸ್ಕಾರ ನೆರವೇರಲಿದೆ.

ಕೆಕೆ ಸಾವಿಗೆ ಹೃದಯಸ್ತಂಭನವೇ ಕಾರಣ: ಪ್ರಾಥಮಿಕ ವರದಿ

ಸೊಪೋರಿ ಅವರ ಸಂತೂರ್ ವಾದನಕ್ಕೆ 2004ರಲ್ಲಿ ಪದ್ಮಶ್ರೀ ಸಹಿತ ಹಲವು ಪ್ರಶಸ್ತಿ, ಗೌರವ ಸಂದಿವೆ.

ಕೆಕೆ ಸಾವು: ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.