ಹೈದರಾಬಾದ್: ‘ಭಾರತದ ವಿರುದ್ಧ ಪಾಕಿಸ್ತಾನ ಭಯೋತ್ಪಾದಕ ಚಟುವಟಿಕೆ ನಡೆಸುವುದನ್ನು ನಿಲ್ಲಿಸುವವರೆಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಹಾಗೂ ಸಾರ್ಕ್ ಶೃಂಗಸಭೆಯಲ್ಲೂ ಪಾಲ್ಗೊಳ್ಳುವುದಿಲ್ಲ’ ಎಂದು ವಿದೇಶಾಂಗ ವ್ಯವಹಾರ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ.

ಸಾರ್ಕ್ ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುತ್ತದೆ ಎನ್ನುವ ಪಾಕಿಸ್ತಾನದ ಹೇಳಿಕೆಗೆ ಅವರು ಈ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ಕರ್ತಾರಪುರ ಕಾರಿಡಾರ್ ಯೋಜನೆಗೂ, ಭಾರತ–ಪಾಕಿಸ್ತಾನದ ನಡುವಿನ ಮಾತುಕತೆಗೂ ಯಾವುದೇ ಸಂಬಂಧವಿಲ್ಲ ಎಂದೂ ಅವರು ಹೇಳಿದ್ದಾರೆ.

ಪಾಕಿಸ್ತಾನದ ಕರ್ತಾರಪುರದಲ್ಲಿರುವ ಗುರುದ್ವಾರ ದರ್ಬಾರ್ ಸಾಹಿಬ್ ಹಾಗೂ ಭಾರತದ ಪಂಜಾಬ್ನ ಗುರುದಾಸಪುರ ಜಿಲ್ಲೆಯ ಡೇರಾ ಬಾಬಾ ನಾನಕ್ ಗುರುದ್ವಾರಕ್ಕೆ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಸೋಮವಾರವಷ್ಟೇ ಭಾರತ ಚಾಲನೆ ನೀಡಿತ್ತು. ಬುಧವಾರ (ನ.28) ಪಾಕಿಸ್ತಾನ ತನ್ನ ಬದಿಯ ಕಾಮಗಾರಿಗೆ ಚಾಲನೆ ನೀಡುವುದಕ್ಕೆ ಕೆಲವೇ ತಾಸುಗಳ ಮೊದಲು ಸುಷ್ಮಾ ಈ ಹೇಳಿಕೆ ನೀಡಿದ್ದಾರೆ.

ಈ ಕಾರಿಡಾರ್ ನಿರ್ಮಾಣದಿಂದಾಗಿ, ಭಾರತದಲ್ಲಿನ ಸಿಖ್ ಯಾತ್ರಿಕರು ಕರ್ತಾರಪುರಕ್ಕೆ ವೀಸಾಮುಕ್ತ ಪ್ರವಾಸ ಕೈಗೊಳ್ಳಬಹುದು. ಈ ನಿಟ್ಟಿನಲ್ಲಿ ಕಾರಿಡಾರ್ ನಿರ್ಮಿಸುವಂತೆಭಾರತ ಹಲವು ವರ್ಷಗಳಿಂದ ಮನವಿ ಮಾಡುತ್ತಾ ಬಂದಿತ್ತು.

ಈ ಕುರಿತು ಮಾತನಾಡಿದ ಸುಷ್ಮಾ, ‘ಪಾಕಿಸ್ತಾನ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದು ಇದೇ ಮೊದಲು. ಇದರಿಂದ ಸಂತಸವಾಗಿದೆ. ಆದರೆ ಕೇವಲ ಇದರ ಆಧಾರದ ಮೇಲೆ ದ್ವಿಪಕ್ಷೀಯ ಮಾತುಕತೆ ಆರಂಭಿಸಲು ಸಾಧ್ಯವಿಲ್ಲ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.