ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.

ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿರುವ ಆಮ್ ಆದ್ಮಿ ಪಕ್ಷವು (ಎಎಪಿ), 'ಸತ್ಯಮೇವ ಜಯತೇ' ಎಂದು ಹರ್ಷ ವ್ಯಕ್ತಪಡಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಜಾರಿ ನಿರ್ದೇಶನಾಲಯದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್, ಕೇಜ್ರಿವಾಲ್ ಅವರಿಗೆ ಈಗಾಗಲೇ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಇದೇ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಜಾಮೀನು ಪಡೆದಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, 'ಸುಳ್ಳು ಮತ್ತು ಸಂಚಿನ ವಿರುದ್ಧದ ಹೋರಾಟದಲ್ಲಿ ಸತ್ಯಕ್ಕೆ ಮಗದೊಮ್ಮೆ ಜಯ ಸಿಕ್ಕಿದೆ' ಎಂದು ಹೇಳಿದ್ದಾರೆ.

ದೆಹಲಿ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಎಎಪಿ ಪಕ್ಷಕ್ಕೆ ಕೇಜ್ರಿವಾಲ್ ಜೈಲಿನಿಂದ ಬಿಡುಗಡೆಯಾಗುತ್ತಿರುವುದು ಮತ್ತಷ್ಟು ಉತ್ತೇಜನ ತುಂಬುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.
.ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್.ದೆಹಲಿಯಲ್ಲಿ ಕೇಜ್ರಿವಾಲ್ ಸರ್ಕಾರದಿಂದ ಶಿಕ್ಷಣ ಕ್ರಾಂತಿ: ಆತಿಶಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.