ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸತ್ಯಮೇವ ಜಯತೇ: ಕೇಜ್ರಿವಾಲ್‌ಗೆ ಜಾಮೀನು ಲಭಿಸಿದ್ದಕ್ಕೆ ಎಎಪಿ ಹರ್ಷ

Published 12 ಜುಲೈ 2024, 6:19 IST
Last Updated 12 ಜುಲೈ 2024, 6:19 IST
ಅಕ್ಷರ ಗಾತ್ರ

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿಕೊಂಡ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದಕ್ಕೆ ಆಮ್‌ ಆದ್ಮಿ ಪಕ್ಷವು ಹರ್ಷ ವ್ಯಕ್ತಪಡಿಸಿದೆ.

ಅರವಿಂದ ಕೇಜ್ರಿವಾಲ್ ಅವರು ತ್ರಿವರ್ಣ ಧ್ವಜ ಹಿಡಿದಿರುವ ಚಿತ್ರವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪಕ್ಷವು, ‘ಸತ್ಯಮೇವ ಜಯತೇ’ ಎಂದು ‌ಬರೆದುಕೊಂಡಿದೆ.

ಅಬಕಾರಿ ನೀತಿ ಹಗರಣದಲ್ಲಿ ಇ.ಡಿ ದಾಖಲಿಸಿಕೊಂಡ ಪ್ರಕರಣಲ್ಲಿ ಕೇಜ್ರಿವಾಲ್ ಅವರಿಗೆ ಜಾಮೀನು ಲಭಿಸಿದರೂ, ಜೈಲಿನಿಂದ ಹೊರಬರುವಂತಿಲ್ಲ. ಇದೇ ಪ್ರಕರಣದಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಅವರನ್ನು ಸಿಬಿಐ ಬಂಧಿಸಿದೆ.

ಇದೇ ವರ್ಷ ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಇ.ಡಿ ಬಂಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT