ನವದೆಹಲಿ: ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಸ್ಮಾರಕ ಸಮಿತಿಯ ಆಡಳಿತ ಮಂಡಳಿಗೆ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದೆ.

ಚುನಾವಣೆ ನಡೆಸುವುದಕ್ಕೆ ತಡೆ ನೀಡಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಮಿತಿಯ ಸದಸ್ಯ ಡಿ.ಬಿ.ಇನಾಂದಾರ್ ಅವರು ವಿಶೇಷ ಅನುಜ್ಞಾ ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ಇದರ ವಿಚಾರಣೆ ನಡೆಸಿತು.

ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಚುನಾವಣೆ ನಡೆಸಲು ಹೈಕೋರ್ಟ್ ತಡೆ ನೀಡಿರುವುದನ್ನು ಅರ್ಜಿದಾರರ ಪರ ವಕೀಲರು ನ್ಯಾಯಪೀಠದ ಗಮನಕ್ಕೆ ತಂದರು. ಅವರ ವಾದ ಆಲಿಸಿದ ನ್ಯಾಯಪೀಠ ಇದೇ 27ರಂದು ಚುನಾವಣೆ ನಡೆಸುವಂತೆ ಆದೇಶಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.