ನವದೆಹಲಿ: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ಇರುವ ‘ನೀಟ್’ ಅನ್ನು ಮುಂದಿನ ವರ್ಷದಿಂದ ಆನ್ಲೈನ್ನಲ್ಲೇ ನಡೆಸುವ ಕುರಿತು ಚಿಂತಿಸಲುರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಹಾಗೂ ಭಾರತೀಯ ವೈದ್ಯಕೀಯ ಮಂಡಳಿಗೆ (ಎಂಸಿಐ) ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ.

ಜೆಇಇ ರೀತಿಯೇ ಆನ್ಲೈನ್ನಲ್ಲಿ ನೀಟ್ ನಡೆಸುವ ಸಲಹೆಗಳನ್ನು ಪರಿಗಣಿಸಿ ಎಂದು ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ಅವರಿದ್ದ ಪೀಠವು ಸೂಚಿಸಿದೆ. ವಿದೇಶಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಹಾಯವಾಗುವಂತೆ ಮಧ್ಯಪ್ರಾಚ್ಯ ಹಾಗೂ ಗಲ್ಫ್ ರಾಷ್ಟ್ರಗಳಲ್ಲಿ ನೀಟ್ ಕೇಂದ್ರಗಳನ್ನು ಸ್ಥಾಪಿಸಲು ಎನ್ಟಿಎಗೆ ನಿರ್ದೇಶಿಸಬೇಕು ಎಂದು ಕೋರಿ ಅಬ್ದುಲ್ ಅಜೀಜ್ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ಪೀಠ ತಿರಸ್ಕರಿಸಿತು.

ಕ್ವಾರಂಟೈನ್ ವಿನಾಯಿತಿ: ಪರೀಕ್ಷೆ ಬರೆಯಲು ಆಗಮಿಸುವವರಿಗೆ 14 ದಿನಗಳ ಕ್ವಾರಂಟೈನ್ ನಿಯಮದಿಂದ ವಿನಾಯಿತಿಗೆ ಆಯಾ ರಾಜ್ಯ ಸರ್ಕಾರಗಳನ್ನೇ ಸಂಪರ್ಕಿಸಲು ಪೀಠ ಒಪ್ಪಿಗೆ ನೀಡಿದೆ.

ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕೆ ಇರುವ ಜೆಇಇಗೆ ಎನ್ಟಿಎ ವಿದೇಶಗಳಲ್ಲಿ ಕೇಂದ್ರ ಸ್ಥಾಪಿಸಿತ್ತು. ಇದೇ ರೀತಿ ನೀಟ್ಗೂ ಕೇಂದ್ರಗಳನ್ನು ತೆರೆಯಬೇಕು ಎಂದು ಅರ್ಜಿದಾರರು ಮನವಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.