ನವದೆಹಲಿ: ಕೋವಿಡ್–19 ಸಾಂಕ್ರಾಮಿಕದ ಸಮಯದಲ್ಲಿ ಅಲೋಪತಿ ಔಷಧದ ಬಳಕೆ ಕುರಿತು ನೀಡಿರುವ ಹೇಳಿಕೆಯ ಮೂಲ ದಾಖಲೆಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಯೋಗಗುರು ಬಾಬಾ ರಾಮದೇವ್ಗೆ ಸುಪ್ರೀಂ ಕೋರ್ಟ್ ತಿಳಿಸಿದೆ.

ಬುಧವಾರ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನಾಯಮೂರ್ತಿ ಎನ್.ವಿ.ರಮಣ ಅವರನ್ನೊಳಗೊಂಡ ಪೀಠ, ‘ಅಲೋಪತಿ ಔಷಧ ಕುರಿತು ಅವರು ನೀಡಿರುವ ಮೂಲ ಹೇಳಿಕೆ ಯಾವುದು ? ನೀವು ಪೂರ್ಣ ಹೇಳಿಕೆ ಮತ್ತು ಮಾಹಿತಿಯನ್ನು ನ್ಯಾಯಾಲಯಕ್ಕೆ ನೀಡಿಲ್ಲ‘ ಎಂದು ರಾಮ್ದೇವ್ ಪರ ಹಾಜರಾಗಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರಿಗೆ ಹೇಳಿದರು.

‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಲ ವಿಡಿಯೊದ ದೃಶ್ಯಗಳು ಮತ್ತು ಅದರಲ್ಲಿನ ಮಾಹಿತಿಯನ್ನು ಲಿಖಿತ ರೂಪದಲ್ಲಿ ಸಲ್ಲಿಸುವುದಾಗಿ ನ್ಯಾಯಾಧೀಶರಾದ ಎ ಎಸ್ ಬೋಪಣ್ಣ ಮತ್ತು ಹೃಷಿಕೇಶ ರಾಯ್ ಅವರನ್ನೊಳಗೊಂಡ ಪೀಠದ ಎದುರು ತಿಳಿಸಿದರು. ಇದಕ್ಕೆ ಸಮ್ಮತಿಸಿದ ನ್ಯಾಯಪೀಠ ಪ್ರಕರಣದ ವಿಚಾರಣೆಯನ್ನು ಜುಲೈ 5ಕ್ಕೆ ಮುಂದೂಡಿತು.

ಅಲೋಪತಿ ಔಷಧದ ಕುರಿತು ರಾಮ್ದೇವ್ ನೀಡಿದ ಹೇಳಿಕೆ ವಿರೋಧಿಸಿ, ಅವರ ವಿರುದ್ಧ ಛತ್ತೀಸ್ಗಡ ಮತ್ತು ಬಿಹಾರ ರಾಜ್ಯದ ಭಾರತೀಯ ವೈದ್ಯಕೀಯ ಸಂಘ ದೂರು ನೀಡಿತ್ತು. ಈ ಸಂಬಂಧ ರಾಮ್ದೇವ್ ವಿರುದ್ಧ ಹಲವು ಎಫ್ಐಆರ್ ಗಳು ದಾಖಲಾಗಿವೆ. ಎಫ್ಐಆರ್ಗಳಿಗೆ ತಡೆ ನೀಡುವಂತೆ ಕೋರಿ ರಾಮ್ದೇವ್ ಅವರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯ ಬುಧವಾರ ಈ ಅರ್ಜಿಯ ವಿಚಾರಣೆ ನಡೆಸಿತು.

ಇದನ್ನೂ ಓದಿ... ಉತ್ತರ ಪ್ರದೇಶದಲ್ಲಿ 2022ರಲ್ಲಿ ಪ್ರಜಾಪ್ರಭುತ್ವ ಕ್ರಾಂತಿ: ಅಖಿಲೇಶ್ ಯಾದವ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.