ನವದೆಹಲಿ: ಪ್ರಕರಣವೊಂದರ ಸಂಬಂಧ ಐದು ವರ್ಷ ಸಜೆ ವಿಧಿಸಿದ್ದ ಅಲಹಾಬಾದ್ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಮಾಜಿ ಶಾಸಕ, ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಕ್ತಾಯಗೊಳಿಸಿದೆ.

ಅನ್ಸಾರಿ ಸಾವಿನ ಹಿನ್ನೆಲೆಯಲ್ಲಿ ಕೋರ್ಟ್ ಈ ತೀರ್ಮಾನ ಕೈಗೊಂಡಿದೆ. 24 ವರ್ಷ ಹಳೆಯ ಪ್ರಕರಣವೊಂದರ ಸಂಬಂಧ ಹೈಕೋರ್ಟ್ ಅನ್ಸಾರಿಗೆ 5 ವರ್ಷ ಸಜೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.

‘ಅರ್ಜಿದಾರರು ನಿಧನರಾಗಿದ್ದಾರೆ. ಪ್ರಕರಣ ಮುಕ್ತಾಯಗೊಳಿಸಬಹುದು’ ಎಂದು ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಮತ್ತು ಪಂಕಜ್ ಮಿತ್ತಲ್ ಅವರಿದ್ದ ಪೀಠವು ಅಭಿಪ್ರಾಯಪಟ್ಟಿತು. ಅನ್ಸಾರಿ ಮಾರ್ಚ್ 28ರಂದು ಹೃದಯಸ್ತಂಭನದಿಂದ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.