ನವದೆಹಲಿ: ಲೈಂಗಿಕ ಶೋಷಣೆ ಉದ್ದೇಶದ ಮಾನವ ಕಳ್ಳಸಾಗಣೆಯ ಸಂತ್ರಸ್ತರಿಗೆ ಸಮಗ್ರ ಪುನರ್ವಸತಿ ಕಲ್ಪಿಸುವುದಕ್ಕೆ ಸಂಬಂಧಿಸಿದ ಕಾನೂನಿನ ಕೊರತೆ ಕಾಡುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ವಿಚಾರವನ್ನು ಪರಿಗಣಿಸಿ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಮತ್ತು ಪಂಕಜ್ ಮಿತ್ತಲ್ ಅವರನ್ನೊಳಗೊಂಡ ಪೀಠವು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ.

ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರಿಗೆ ಸಂಬಂಧಿಸಿದಂತೆ 2015ರ ತೀರ್ಪಿನ ಪಾಲನೆಯ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

‘ಮಾನವ ಕಳ್ಳಸಾಗಣೆ ಮತ್ತು ಲೈಂಗಿಕ ಶೋಷಣೆ ಉದ್ದೇಶದ ಕಳ್ಳಸಾಗಣೆಯ ಸಂತ್ರಸ್ತರು ಜೀವನದಲ್ಲಿ ಸಾಕಷ್ಟು ತೊಂದೆ ಅನುಭವಿಸುವರು. ಈ ಅಪರಾಧಗಳು ಅವರ ಜೀವಿಸುವ ಹಕ್ಕು, ಸ್ವಾತಂತ್ರ್ಯ ಮತ್ತು ವೈಯಕ್ತಿಕ ಸುರಕ್ಷತೆಯನ್ನು ಉಲ್ಲಂಘಿಸುತ್ತವೆ. ಸಮಾಜದ ಅಂಚಿನಲ್ಲಿರುವ ವರ್ಗಗಳು ಅದರಲ್ಲೂ ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳು ಇಂತಹ ಅಪರಾಧಗಳಿಗೆ ತುತ್ತಾಗುತ್ತಿದ್ದಾರೆ’ ಎಂದು ಹೇಳಿದೆ.

‘ಇಂತಹ ಅಪರಾಧಗಳ ಸಂತ್ರಸ್ತರು ತಮ್ಮನ್ನು ಕಳ್ಳಸಾಗಣೆ ಮಾಡುವವರಿಂದ ಹೆಚ್ಚಾಗಿ ದೌರ್ಜನ್ಯಕ್ಕೊಳಗಾಗುತ್ತಾರೆ. ಹಲವು ರೀತಿಯ ದೈಹಿಕ ಮತ್ತು ಮಾನಸಿಕ ಹಿಂಸೆಯನ್ನು ಸಹಿಸಿಕೊಳ್ಳಬೇಕಾಗುತ್ತದೆ. ಲೈಂಗಿಕವಾಗಿ ಹರಡುವ ರೋಗಗಳಿಗೆ ತುತ್ತಾಗುವ ಹೆಚ್ಚಿನ ಅಪಾಯವಿದೆ’ ಎಂದಿದೆ.

‘ಸಂತ್ರಸ್ತರ ಮಾನಸಿಕ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮಗಳು ಉಂಟಾಗುತ್ತದೆ. ಅವರು ಪೋಸ್ಟ್ ಟ್ರಾಮಾಟಿಕ್ ಸ್ಟ್ರೆಸ್ ಡಿಸಾರ್ಡರ್ (ಪಿಟಿಎಸ್ಡಿ) ಮತ್ತು ಖಿನ್ನತೆಗೆ ಒಳಗಾಗಬಹುದು. ಅವರಿಗೆ ವೈದ್ಯರು ಮತ್ತು ಮನೋವೈದ್ಯರ ನಿರಂತರ ಚಿಕಿತ್ಸೆಯ ಅಗತ್ಯವಿರುತ್ತದೆ’ ಎಂದು ಪೀಠ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.