ನವದೆಹಲಿ: 2009ರಲ್ಲಿ ನ್ಯಾಯಾಂಗದ ವಿರುದ್ಧ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ-ವಕೀಲ ಪ್ರಶಾಂತ್ ಭೂಷಣ್ ಮತ್ತು ಪತ್ರಕರ್ತ ತರುಣ್ ತೇಜಪಾಲ್ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕೈಬಿಟ್ಟಿದೆ.

ಇಬ್ಬರೂ ಕ್ಷಮಾಪಣೆ ಕೋರಿದ್ದಾರೆ ಎಂದು ಹಿರಿಯ ವಕೀಲ ಕಪಿಲ್ ಸಿಬಲ್ ಅವರು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಸೂರ್ಯಕಾಂತ್ ಮತ್ತು ಎಂಎಂ ಸುಂದ್ರೇಶ್ ಅವರ ಪೀಠಕ್ಕೆ ತಿಳಿಸಿದರು. ನಂತರ ಪೀಠವು ವಿಚಾರಣೆಯನ್ನು ಮುಕ್ತಾಯಗೊಳಿಸಿತು.

'ಟೀಕಾಕಾರರು ಕ್ಷಮೆಯಾಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ನ್ಯಾಯಾಂಗ ನಿಂದನೆಯನ್ನು ಮುಂದುವರಿಸುವುದು ಅಗತ್ಯವೆಂದು ನಾವು ಭಾವಿಸುವುದಿಲ್ಲ. ನಿಂದನೆ ಪ್ರಕ್ರಿಯೆಗಳನ್ನು ಕೈಬಿಡಲಾಗಿದೆ’ ಎಂದು ಪೀಠ ಹೇಳಿದೆ.

ಸುದ್ದಿ ನಿಯತಕಾಲಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕೆಲವು ನ್ಯಾಯಾಧೀಶರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ 2009ರ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಪ್ರಶಾಂತ್ ಭೂಷಣ್ ಮತ್ತು ತೇಜಪಾಲ್‌ಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿತ್ತು. ಆಗ ತೇಜಪಾಲ್ ಅವರು ಪತ್ರಿಕೆಯ ಸಂಪಾದಕರಾಗಿದ್ದರು.

ನ್ಯಾಯಾಧೀಶರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡುವುದು ನ್ಯಾಯಾಲಯದ ನಿಂದನೆಯಾಗುವುದಿಲ್ಲ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಕೇವಲ ಹೇಳಿಕೆಯು ನ್ಯಾಯಾಲಯದ ನಿಂದನೆಯಾಗುವುದಿಲ್ಲ ಎಂದು ಪ್ರಶಾಂತ್ ಭೂಷಣ್ ಅವರು ಸುಪ್ರೀಂ ಕೋರ್ಟ್‌ಗೆ ವಿಚಾರಣೆ ವೇಳೆ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.